ಬೆಂಗಳೂರು, ಆಗಸ್ಟ್ 8: ಭಾರತದಲ್ಲಿ ಚಿನ್ನದ ಬೆಲೆ (Gold Rates) ಯಥಾಸ್ಥಿತಿಯಲ್ಲಿದ್ದರೂ ವಿದೇಶದ ಕೆಲವೆಡೆ ಬೆಲೆ ಇಳಿಕೆಯಾಗಿದೆ. ದುಬೈ, ಓಮನ್ ಮೊದಲಾದ ಕಡೆ ಚಿನ್ನದ ಬೆಲೆ ಇಳಿದಿದೆ. ಭಾರತದಲ್ಲೂ ಇದರ ಬೆಲೆ ಇಂದು ಇಳಿಕೆಯಾಗುವ ನಿರೀಕ್ಷೆ ಇದೆ. ಇದೇ ವೇಳೆ ಬೆಳ್ಳಿ ಬೆಲೆ ತುಸು ತಗ್ಗಿದೆ. ರಾಷ್ಟ್ರೀಯ ಮಟ್ಟದಲ್ಲಿ ಬೆಳ್ಳಿ ಬೆಲೆ ಗ್ರಾಂಗೆ 75 ರೂ ಇದೆ. ಬೆಂಗಳೂರಿನಲ್ಲಿ ರಜತದ ಬೆಲೆ ಗ್ರಾಂಗೆ 74 ರೂ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 55,150 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 60,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 55,150 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,400 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Arecanut Price 7 August: ಇಂದಿನ ಅಡಿಕೆ ಧಾರಣೆ ಹೀಗಿದೆ, ಕೋಕೋ ದರ ಹೇಗಿದೆ?
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ