AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 09 August: ಭಾರತ ಹಾಗೂ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ಇತ್ತೀಚಿನ ದರಗಳ ಪಟ್ಟಿ

Bullion Market 2023, August 9th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,060 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74 ರು ಆಗಿದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 09 August: ಭಾರತ ಹಾಗೂ ವಿದೇಶಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ಇತ್ತೀಚಿನ ದರಗಳ ಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 09, 2023 | 5:03 AM

Share

ಬೆಂಗಳೂರು, ಆಗಸ್ಟ್ 9: ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold Rates) ಕಡಿಮೆಗೊಳ್ಳುತ್ತಿವೆ. ಡಾಲರ್ ಮೌಲ್ಯ ವೃದ್ಧಿಸುತ್ತಿರುವಂತೆಯೇ ಈ ಅಮೂಲ್ಯ ಲೋಹಗಳಿಗೆ ಬೇಡಿಕೆ ತುಸು ತಗ್ಗಿದೆ. ಯುಎಇ ಸೇರಿದಂತೆ ಕೆಲವಾರು ದೇಶಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ಭಾರತದ ವಿವಿಧೆಡೆಯೂ ನಿರೀಕ್ಷೆಯಂತೆ ಚಿನ್ನದ ದರ ತಗ್ಗಿದೆ. ಬೆಳ್ಳಿ ಬೆಲೆಯೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,050 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,060 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,400 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,050 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಆಗಸ್ಟ್ 9ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,060 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,050 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,060 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 55,050 ರೂ
  • ಚೆನ್ನೈ: 55,400 ರೂ
  • ಮುಂಬೈ: 55,050 ರೂ
  • ದೆಹಲಿ: 55,200 ರೂ
  • ಕೋಲ್ಕತಾ: 55,050 ರೂ
  • ಕೇರಳ: 55,050 ರೂ
  • ಅಹ್ಮದಾಬಾದ್: 55,100 ರೂ
  • ಜೈಪುರ್: 55,200 ರೂ
  • ಲಕ್ನೋ: 55,200 ರೂ
  • ಭುವನೇಶ್ವರ್: 55,050 ರೂ

ಇದನ್ನೂ ಓದಿ: 2,000 ರೂ ನೋಟು ವಿನಿಮಯಕ್ಕೆ ಸೆಪ್ಟೆಂಬರ್ 30 ಕೊನೆಯ ದಿನ; ಬ್ಯಾಂಕುಗಳು ಯಾವ್ಯಾವಾಗ ಮುಚ್ಚಿರುತ್ತೆ ತಿಳಿದಿರಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,830 ರಿಂಗಿಟ್ (51,517 ರುಪಾಯಿ)
  • ದುಬೈ: 2167.50 ಡಿರಾಮ್ (48,903 ರುಪಾಯಿ)
  • ಅಮೆರಿಕ: 595 ಡಾಲರ್ (49,226 ರುಪಾಯಿ)
  • ಸಿಂಗಾಪುರ: 808 ಸಿಂಗಾಪುರ್ ಡಾಲರ್ (49,620 ರುಪಾಯಿ)
  • ಕತಾರ್: 2,235 ಕತಾರಿ ರಿಯಾಲ್ (50,873 ರೂ)
  • ಓಮನ್: 236.50 ಒಮಾನಿ ರಿಯಾಲ್ (50,910 ರುಪಾಯಿ)
  • ಕುವೇತ್: 186 ಕುವೇತಿ ದಿನಾರ್ (50,094 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,300 ರೂ
  • ಚೆನ್ನೈ: 7,730 ರೂ
  • ಮುಂಬೈ: 7,400 ರೂ
  • ದೆಹಲಿ: 7,400 ರೂ
  • ಕೋಲ್ಕತಾ: 7400 ರೂ
  • ಕೇರಳ: 7,730 ರೂ
  • ಅಹ್ಮದಾಬಾದ್: 7,400 ರೂ
  • ಜೈಪುರ್: 7,400 ರೂ
  • ಲಕ್ನೋ: 7,400 ರೂ
  • ಭುವನೇಶ್ವರ್: 7,730 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸುಗ್ಗನಹಳ್ಳಿ ವಿಜಯಸಾರಥಿ
ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
Horoscope Today: ಕುಜ ಗ್ರಹವು ಕರ್ಕಾಟಕ ರಾಶಿಯಿಂದ ಸಿಂಹ ರಾಶಿಗೆ ಪ್ರವೇಶ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ಬಿಗ್ ಬಾಸ್ ಮನೆಯಲ್ಲಿ ಗಾನವಿಗೆ ಮೆಮೋರಿ ಲಾಸ್? ಟಾಸ್ಕ್ ಬಳಿಕ ಏನೂ ನೆನಪಿಲ್ಲ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ರಿಷಬ್ ಶೆಟ್ಟಿ, ಪ್ರಮೋದ್ ಶೆಟ್ಟಿ ದೂರ ಆಗಿಲ್ಲ: ಸ್ಪಷ್ಟನೆ ನೀಡಿದ ನಟ
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್
ಹಾವೇರಿಯಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ಎಮರ್ಜೆನ್ಸಿ ಲ್ಯಾಂಡಿಂಗ್
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
ಹಾಸನ ಡಿಸಿ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಜೆಡಿಎಸ್ ದೂರು
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
25 ಲಕ್ಷ ರೂ. ಲಂಚ ಪಡೆದು ತಹಸೀಲ್ದಾರ್ ವಂಚಿಸಿದ ಆರೋಪ
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
ರಸ್ತೆ ಗುಂಡಿ ಮುಚ್ಚಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದ ನಟ ವಿನೋದ್ ರಾಜ್
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
KPSC ಹಗರಣ: ಸಾಹುಕಾರ್, ಕನ್ನಾಳೆ ಜಾಮೀನು ಅರ್ಜಿ ವಜಾ; ಗೀತಾಗೆ ಜಾಮೀನು
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ
ಮಂಜ ಬಂದಿದ್ದೆ, ಮತ್ತೆ ರದ್ದಾಯ್ತು ಟಾಸ್ಕ್: ವಿಡಿಯೋ
ಕರಡಿ ಬೆನ್ನಟ್ಟಿದ ಹುಲಿರಾಯ: ಅಪರೂಪದ ದೃಶ್ಯ ಕಣ್ತುಂಬಿಕೊಂಡ ಸಫಾರಿಗರು
ಕರಡಿ ಬೆನ್ನಟ್ಟಿದ ಹುಲಿರಾಯ: ಅಪರೂಪದ ದೃಶ್ಯ ಕಣ್ತುಂಬಿಕೊಂಡ ಸಫಾರಿಗರು