Gold Silver Price on 11th December: ಚಿನ್ನದ ಬೆಲೆ ಮತ್ತೆ ದೊಡ್ಡ ಏರಿಕೆ; ಬೆಳ್ಳಿ ಬೆಲೆ ಇಳಿಕೆ

Bullion Market 2024 December 11th: ನಿನ್ನೆ ಮಂಗಳವಾರ ಗ್ರಾಮ್​ಗೆ 75 ರೂ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ಬುಧವಾರ 80 ರೂನಷ್ಟು ದುಬಾರಿಯಾಗಿದೆ. ಈ ಏರಿಕೆಯೊಂದಿಗೆ ಭಾರತದ ಕೆಲವಡೆ 22 ಕ್ಯಾರಟ್ ಚಿನ್ನದ ಬೆಲೆ 7,300 ರೂ ತಲುಪಿದೆ. ಆಭರಣ ಚಿನ್ನದ ಬೆಲೆ 7,947 ರೂಗೆ ಏರಿದೆ. ಬೆಳ್ಳಿ ಬೆಲೆ 1 ರೂ ತಗ್ಗಿದ್ದು 95.50 ರೂ ಹಾಗೂ 103 ರೂ ಆಗಿದೆ.

Gold Silver Price on 11th December: ಚಿನ್ನದ ಬೆಲೆ ಮತ್ತೆ ದೊಡ್ಡ ಏರಿಕೆ; ಬೆಳ್ಳಿ ಬೆಲೆ ಇಳಿಕೆ
ಚಿನ್ನ

Updated on: Dec 11, 2024 | 10:15 AM

ಬೆಂಗಳೂರು, ಡಿಸೆಂಬರ್ 11: ಚಿನ್ನದ ಬೆಲೆಯ ಸತತ ಏರಿಕೆ ಇವತ್ತು ಬುಧವಾರವೂ ಮುಂದುವರಿದಿದೆ. ಇಂದು ಗ್ರಾಮ್​ಗೆ 80 ರೂನಷ್ಟು ಬೆಲೆ ಏರಿಕೆ ಆಗಿದೆ. ದೆಹಲಿ ಮೊದಲಾದ ಕೆಲವೆಡೆ 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,300 ರೂ ಗಡಿ ಮುಟ್ಟಿದೆ. ಬೆಂಗಳೂರು ಇತ್ಯಾದಿ ಕಡೆ 7,285 ರೂಗೆ ಏರಿದೆ. ಇನ್ನೊಂದೆಡೆ, ಬೆಳ್ಳಿ ಬೆಲೆಯಲ್ಲಿ ಇಳಿಕೆ ಆಗಿದೆ. ನಿನ್ನೆ ಗ್ರಾಮ್​ಗೆ 4-5 ರೂನಷ್ಟು ಭಾರೀ ಏರಿಕೆ ಕಂಡಿದ್ದ ಬೆಳ್ಳಿ ಬೆಲೆ ಇವತ್ತು ಒಂದು ರೂ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 95.50 ರೂ ಇದ್ದರೆ ಚೆನ್ನೈ ಮೊದಲಾದ ಕಡೆ 103 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 72,850 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 79,470 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 72,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,550 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 11ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,470 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,610 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 955 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 72,850 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,470 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 955 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 72,850 ರೂ
  • ಚೆನ್ನೈ: 72,850 ರೂ
  • ಮುಂಬೈ: 72,850 ರೂ
  • ದೆಹಲಿ: 73,000 ರೂ
  • ಕೋಲ್ಕತಾ: 72,850 ರೂ
  • ಕೇರಳ: 72,850 ರೂ
  • ಅಹ್ಮದಾಬಾದ್: 72,900 ರೂ
  • ಜೈಪುರ್: 73,000 ರೂ
  • ಲಕ್ನೋ: 73,000 ರೂ
  • ಭುವನೇಶ್ವರ್: 72,850 ರೂ

ಇದನ್ನೂ ಓದಿ: Petrol Diesel Price on December 11: ಬಿಹಾರ, ಮಹಾರಾಷ್ಟ್ರದಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (69,590 ರುಪಾಯಿ)
  • ದುಬೈ: 3,010 ಡಿರಾಮ್ (69,540 ರುಪಾಯಿ)
  • ಅಮೆರಿಕ: 780 ಡಾಲರ್ (66,190 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,740 ರುಪಾಯಿ)
  • ಕತಾರ್: 3,050 ಕತಾರಿ ರಿಯಾಲ್ (71,000 ರೂ)
  • ಸೌದಿ ಅರೇಬಿಯಾ: 3,080 ಸೌದಿ ರಿಯಾಲ್ (69,560 ರುಪಾಯಿ)
  • ಓಮನ್: 321 ಒಮಾನಿ ರಿಯಾಲ್ (70,750 ರುಪಾಯಿ)
  • ಕುವೇತ್: 246.30 ಕುವೇತಿ ದಿನಾರ್ (67,960 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,550 ರೂ
  • ಚೆನ್ನೈ: 10,300 ರೂ
  • ಮುಂಬೈ: 9,550 ರೂ
  • ದೆಹಲಿ: 9,550 ರೂ
  • ಕೋಲ್ಕತಾ: 9,550 ರೂ
  • ಕೇರಳ: 10,300 ರೂ
  • ಅಹ್ಮದಾಬಾದ್: 9,550 ರೂ
  • ಜೈಪುರ್: 9,550 ರೂ
  • ಲಕ್ನೋ: 9,550 ರೂ
  • ಭುವನೇಶ್ವರ್: 10,300 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us