ಬೆಂಗಳೂರು, ಡಿಸೆಂಬರ್ 16: ಕಳೆದ ವಾರ ಕೊನೆಯವರೆಗೂ ಸಾಕಷ್ಟು ಏರುಪೇರುಗಳನ್ನು ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಇಂದು ಸೋಮವಾರ ಯಥಾಸ್ಥಿತಿಯೊಂದಿಗೆ ವಾರದ ಆರಂಭ ಮಾಡಿವೆ. 22 ಕ್ಯಾರಟ್ ಚಿನ್ನದ ಬೆಲೆ 7,140 ರೂನಲ್ಲಿ ಮುಂದುವರಿದಿದೆ. 18 ಕ್ಯಾರಟ್ ಚಿನ್ನದ ಬೆಲೆ 5,842 ರೂನಲ್ಲಿದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 7,789 ರೂನಲ್ಲಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಗ್ರಾಮ್ಗೆ 92.50 ರೂ ಇದೆ. ಚೆನ್ನೈ ಮೊದಲಾದೆಡೆ ನೂರು ರೂನಲ್ಲಿ ಬೆಲೆ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 71,400 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 77,890 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 71,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,250 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Petrol Diesel Price on December 16: ಭಾರತದಾದ್ಯಂತ ಸ್ಥಿರತೆ ಕಾಯ್ದುಕೊಂಡ ಇಂಧನ ದರ
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ