ಬೆಂಗಳೂರು, ಡಿಸೆಂಬರ್ 18: ಕಳೆದ ವಾರ ಸೂಪರ್ ಜಿಗಿತ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ವಾರಾಂತ್ಯದಲ್ಲಿ ಶಾಂತಗೊಂಡಿದ್ದವು. ಇವತ್ತೂ ತುಸು ಬೆಲೆ ಇಳಿಕೆ ಆಗಿದೆ. ಅಮೆರಿಕದ ಬಡ್ಡಿದರ ವಿಚಾರವು ಕೆಲ ದಿನಗಳಿಂದ ಕೆಲ ಹೂಡಿಕೆದಾರರ ಮನಸ್ಸು ಬದಲಾಗುವಂತೆ ಮಾಡಿತ್ತು. ಈ ವಾರ ಬೇಡಿಕೆಗೆ ಅನುಗುಣವಾಗಿ ದರ ಬದಲಾಗುವ ಸಾಧ್ಯತೆ ಕಾಣುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,300 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,510 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,770 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,550 ರುಪಾಯಿಯಲ್ಲಿ ಇದೆ.
ಇದನ್ನೂ ಓದಿ: ಹೈಡ್ರೋಜನ್ ಉತ್ಪಾದನೆಗೆ ಬೇಕಾದ ಎಲೆಕ್ಟ್ರೋಲೈಸರ್ ಘಟಕಕ್ಕೆ 21 ಕಂಪನಿಗಳಿಂದ ಬಿಡ್; ಪೈಪೋಟಿಯಲ್ಲಿ ಅಂಬಾನಿ, ಅದಾನಿ, ಜಿಂದಾಲ್
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ