Gold Silver Price on 18th December: ತೂಗುಯ್ಯಾಲೆಯಲ್ಲಿರುವ ಚಿನ್ನದ ಬೆಲೆ; ಬುಧವಾರ ತುಸು ಬೆಲೆ ಇಳಿಕೆ

Bullion Market 2024 December 18th: ನಿನ್ನೆ ಮಂಗಳವಾರ ಗ್ರಾಮ್​ಗೆ 10 ರೂನಷ್ಟು ಏರಿಕೆ ಆಗಿದ್ದ ಚಿನ್ನದ ಬೆಲೆ ಇಂದು ಬುಧವಾರ 15 ರೂನಷ್ಟು ಕಡಿಮೆ ಆಗಿದೆ. ವಿದೇಶಗಳಲ್ಲೂ ಹಲವೆಡೆ ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿದೆ. ಬೆಳ್ಳಿ ಬೆಲೆಯಲ್ಲಿ ಇಂದೂ ಕೂಡ ವ್ಯತ್ಯಯ ಆಗಿಲ್ಲ. ಕಳೆದ 10 ದಿನಗಳಿಂದ ಬೆಳ್ಳಿ ಬೆಲೆಯಲ್ಲಿ ಹೆಚ್ಚಿನ ಏರುಪೇರು ಆಗಿಲ್ಲ.

Gold Silver Price on 18th December: ತೂಗುಯ್ಯಾಲೆಯಲ್ಲಿರುವ ಚಿನ್ನದ ಬೆಲೆ; ಬುಧವಾರ ತುಸು ಬೆಲೆ ಇಳಿಕೆ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 18, 2024 | 11:17 AM

ಬೆಂಗಳೂರು, ಡಿಸೆಂಬರ್ 18: ಚಿನ್ನದ ಬೆಲೆ ಈ ವಾರವೂ ತೂಗುಯ್ಯಾಲೆಗೆ ಬಿದ್ದಂತಿದೆ. ಮೊನ್ನೆ ಇಳಿಕೆಯಾಗಿದ್ದ ಚಿನ್ನದ ಬೆಲೆ ನಿನ್ನೆ ತುಸು ಏರಿತ್ತು. ಇವತ್ತು ಬುಧವಾರ ಮತ್ತೆ ಇಳಿದಿದೆ. ಗ್ರಾಮ್​ಗೆ 15 ರೂನಷ್ಟು ಬೆಲೆ ಕಡಿಮೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 7,135 ರು ಆಗಿದೆ. ಅಪರಂಜಿ ಚಿನ್ನದ ಬೆಲೆ 7,784 ರೂಗೆ ತಗ್ಗಿದೆ. ವಿದೇಶಗಳಲ್ಲೂ ಹಲವೆಡೆ ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯಲ್ಲಿ ಇವತ್ತೂ ಯಾವ ವ್ಯತ್ಯಯ ಆಗಿಲ್ಲ. ಕಳೆದ 10 ದಿನಗಳಿಂದ ಬೆಳ್ಳಿ ಬೆಲೆ ಗ್ರಾಮ್​ಗೆ 50 ಪೈಸೆ ಮಾತ್ರವೇ ಏರಿಕೆ ಆಗಿರುವುದು. ನಾಲ್ಕೈದು ದಿನಗಳಿಂದ ಬೆಲೆ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 71,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 71,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,250 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 18ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,840 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 925 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,840 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 925 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 71,350 ರೂ
  • ಚೆನ್ನೈ: 71,350 ರೂ
  • ಮುಂಬೈ: 71,350 ರೂ
  • ದೆಹಲಿ: 71,500 ರೂ
  • ಕೋಲ್ಕತಾ: 71,350 ರೂ
  • ಕೇರಳ: 71,350 ರೂ
  • ಅಹ್ಮದಾಬಾದ್: 71,400 ರೂ
  • ಜೈಪುರ್: 71,500 ರೂ
  • ಲಕ್ನೋ: 71,500 ರೂ
  • ಭುವನೇಶ್ವರ್: 71,350 ರೂ

ಇದನ್ನೂ ಓದಿ: Petrol Diesel Price on December 18: ಜಾರ್ಖಂಡ್​, ಬಿಹಾರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (69,000 ರುಪಾಯಿ)
  • ದುಬೈ: 2,957.50 ಡಿರಾಮ್ (68,380 ರುಪಾಯಿ)
  • ಅಮೆರಿಕ: 780 ಡಾಲರ್ (66,250 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,290 ರುಪಾಯಿ)
  • ಕತಾರ್: 3,010 ಕತಾರಿ ರಿಯಾಲ್ (70,130 ರೂ)
  • ಸೌದಿ ಅರೇಬಿಯಾ: 3,020 ಸೌದಿ ರಿಯಾಲ್ (68,260 ರುಪಾಯಿ)
  • ಓಮನ್: 315 ಒಮಾನಿ ರಿಯಾಲ್ (69,490 ರುಪಾಯಿ)
  • ಕುವೇತ್: 242 ಕುವೇತಿ ದಿನಾರ್ (66,830 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,250 ರೂ
  • ಚೆನ್ನೈ: 10,000 ರೂ
  • ಮುಂಬೈ: 9,250 ರೂ
  • ದೆಹಲಿ: 9,250 ರೂ
  • ಕೋಲ್ಕತಾ: 9,250 ರೂ
  • ಕೇರಳ: 10,000 ರೂ
  • ಅಹ್ಮದಾಬಾದ್: 9,250 ರೂ
  • ಜೈಪುರ್: 9,250 ರೂ
  • ಲಕ್ನೋ: 9,250 ರೂ
  • ಭುವನೇಶ್ವರ್: 10,000 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಾಧ್ಯಮ ವರದಿಗಳ ನಂತರವೇ ಮೇಲಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೇ?
ಮಾಧ್ಯಮ ವರದಿಗಳ ನಂತರವೇ ಮೇಲಧಿಕಾರಿಗಳು ಎಚ್ಚೆತ್ತುಕೊಳ್ಳಬೇಕೇ?
ಉತ್ತರ ಪ್ರದೇಶ: ಬಿಜೆಪಿ ಕಚೇರಿಯನ್ನೇ ನೆಲಸಮ ಮಾಡಿದ ಯೋಗಿ ಸರ್ಕಾರ
ಉತ್ತರ ಪ್ರದೇಶ: ಬಿಜೆಪಿ ಕಚೇರಿಯನ್ನೇ ನೆಲಸಮ ಮಾಡಿದ ಯೋಗಿ ಸರ್ಕಾರ
Karnataka Winter Session Live: ಬೆಳಗಾವಿ ಚಳಿಗಾಲದ ಅಧಿವೇಶನ ಲೈವ್​
Karnataka Winter Session Live: ಬೆಳಗಾವಿ ಚಳಿಗಾಲದ ಅಧಿವೇಶನ ಲೈವ್​
ಕಿತ್ತಾಟದಿಂದ ರದ್ದಾಯ್ತು ಟಾಸ್ಕ್; ದೊಡ್ಡ ಪರಿಣಾಮ ಎದುರಿಸಿದ ಮನೆ ಮಂದಿ
ಕಿತ್ತಾಟದಿಂದ ರದ್ದಾಯ್ತು ಟಾಸ್ಕ್; ದೊಡ್ಡ ಪರಿಣಾಮ ಎದುರಿಸಿದ ಮನೆ ಮಂದಿ
ಜಪ ಮಾಲೆಯಲ್ಲಿನ 108 ಮಣಿಗಳ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
ಜಪ ಮಾಲೆಯಲ್ಲಿನ 108 ಮಣಿಗಳ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯ ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಲಿದೆ
Daily Horoscope: ಈ ರಾಶಿಯ ನಿರುದ್ಯೋಗಿಗಳಿಗೆ ಉದ್ಯೋಗ ಲಭಿಸಲಿದೆ
ಹನುಮಂತ, ಧನರಾಜ್ ಫಿನಾಲೆಗೆ ಹೋದರೂ ಅಚ್ಚರಿ ಇಲ್ಲ: ಭವಿಷ್ಯ ನುಡಿದ ಶಿಶಿರ್
ಹನುಮಂತ, ಧನರಾಜ್ ಫಿನಾಲೆಗೆ ಹೋದರೂ ಅಚ್ಚರಿ ಇಲ್ಲ: ಭವಿಷ್ಯ ನುಡಿದ ಶಿಶಿರ್
ಶಿಮ್ಲಾದಲ್ಲಿರುವ ವಿಶ್ವದ ಎತ್ತರದ ಹನುಮಾನ್ ಪ್ರತಿಮೆಗೆ ಹಿಮದ ಸ್ನಾನ!
ಶಿಮ್ಲಾದಲ್ಲಿರುವ ವಿಶ್ವದ ಎತ್ತರದ ಹನುಮಾನ್ ಪ್ರತಿಮೆಗೆ ಹಿಮದ ಸ್ನಾನ!
ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಶ್ರೀಮುರಳಿ
ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ಶ್ರೀಮುರಳಿ
ನಡುರಸ್ತೆಯಲ್ಲಿ ಯುವತಿಯ ಕೂದಲು ಹಿಡಿದೆಳೆದ ಪುರುಷರು; ವಿಡಿಯೋ ಇಲ್ಲಿದೆ
ನಡುರಸ್ತೆಯಲ್ಲಿ ಯುವತಿಯ ಕೂದಲು ಹಿಡಿದೆಳೆದ ಪುರುಷರು; ವಿಡಿಯೋ ಇಲ್ಲಿದೆ