ಬೆಂಗಳೂರು, ಡಿಸೆಂಬರ್ 18: ಚಿನ್ನದ ಬೆಲೆ ಈ ವಾರವೂ ತೂಗುಯ್ಯಾಲೆಗೆ ಬಿದ್ದಂತಿದೆ. ಮೊನ್ನೆ ಇಳಿಕೆಯಾಗಿದ್ದ ಚಿನ್ನದ ಬೆಲೆ ನಿನ್ನೆ ತುಸು ಏರಿತ್ತು. ಇವತ್ತು ಬುಧವಾರ ಮತ್ತೆ ಇಳಿದಿದೆ. ಗ್ರಾಮ್ಗೆ 15 ರೂನಷ್ಟು ಬೆಲೆ ಕಡಿಮೆ ಆಗಿದೆ. 22 ಕ್ಯಾರಟ್ ಚಿನ್ನದ ಬೆಲೆ 7,135 ರು ಆಗಿದೆ. ಅಪರಂಜಿ ಚಿನ್ನದ ಬೆಲೆ 7,784 ರೂಗೆ ತಗ್ಗಿದೆ. ವಿದೇಶಗಳಲ್ಲೂ ಹಲವೆಡೆ ಚಿನ್ನದ ಬೆಲೆಯಲ್ಲಿ ಇಳಿಕೆ ಆಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯಲ್ಲಿ ಇವತ್ತೂ ಯಾವ ವ್ಯತ್ಯಯ ಆಗಿಲ್ಲ. ಕಳೆದ 10 ದಿನಗಳಿಂದ ಬೆಳ್ಳಿ ಬೆಲೆ ಗ್ರಾಮ್ಗೆ 50 ಪೈಸೆ ಮಾತ್ರವೇ ಏರಿಕೆ ಆಗಿರುವುದು. ನಾಲ್ಕೈದು ದಿನಗಳಿಂದ ಬೆಲೆ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 71,350 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 77,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 71,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,250 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Petrol Diesel Price on December 18: ಜಾರ್ಖಂಡ್, ಬಿಹಾರದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ