ಬೆಂಗಳೂರು, ಡಿಸೆಂಬರ್ 21: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಮತ್ತೆ ಏರಿದೆ. ಚಿನ್ನದ ಬೆಲೆ ಗ್ರಾಮ್ಗೆ 35 ರೂ ಏರಿದೆ. ಬೆಳ್ಳಿ ಗ್ರಾಮ್ಗೆ 1 ರುಪಾಯಿ ಹೆಚ್ಚಿದೆ. ವಿಶ್ವದ ಕೆಲವೆಡೆ ಚಿನ್ನದ ದರ ಯಥಾಸ್ಥಿತಿಯಲ್ಲಿದೆ. ಹಲವೆಡೆ ಏರಿಕೆ ಆಗಿದೆ. ಭಾರತದಲ್ಲಿ ಬಹುತೇಕ ಕಡೆ ಬೆಲೆ ಹೆಚ್ಚಳ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,750 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,850 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,620 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಕಿಸಾನ್ ವಿಕಾಸ್ ಪತ್ರ ಸ್ಕೀಮ್; ನಿಮ್ಮ ಹಣ 10 ವರ್ಷದೊಳಗೆ ಡಬಲ್ ಆಗುತ್ತೆ; ಕೆವಿಪಿ ಪಡೆಯುವುದು ಹೇಗೆ?
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ