Gold Silver Price on 22nd December: ವಾರಾಂತ್ಯದಲ್ಲಿ ಚಿನ್ನ, ಬೆಳ್ಳ ಬೆಲೆ ಏರಿಕೆ

Bullion Market 2024 December 22nd: ಸತತ ಮೂರು ದಿನ ಇಳಿಕೆಯ ಬಳಿಕ ಚಿನ್ನದ ಬೆಲೆ ಗ್ರಾಮ್​ಗೆ 40 ರೂನಷ್ಟು ಏರಿಕೆ. ಆಭರಣ ಚಿನ್ನದ ಬೆಲೆ 7,100 ರೂ ಗಡಿ ಮುಟ್ಟಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ ಒಂದು ರೂನಷ್ಟು ಹೆಚ್ಚಳ ಆಗಿದೆ. 90.50 ರೂ ಇದ್ದ ಬೆಳ್ಳಿ ಬೆಲೆ 91.50 ರೂಗೆ ಏರಿದೆ. ವಿದೇಶದ ಮಾರುಕಟ್ಟೆಗಳ ಪೈಕಿ ಹಲವೆಡೆ ಚಿನ್ನದ ಬೆಲೆಯಲ್ಲಿ ಹೆಚ್ಚಳ ಆಗಿದೆ.

Gold Silver Price on 22nd December: ವಾರಾಂತ್ಯದಲ್ಲಿ ಚಿನ್ನ, ಬೆಳ್ಳ ಬೆಲೆ ಏರಿಕೆ
ಚಿನ್ನ

Updated on: Dec 22, 2024 | 10:59 AM

ಬೆಂಗಳೂರು, ಡಿಸೆಂಬರ್ 22: ಕಳೆದ ಎರಡು ವಾರಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಳಿತ ಮುಂದುವರಿದಿದೆ. ವಾರಾಂತ್ಯದಲ್ಲಿ ಎರಡೂ ಲೋಹಗಳ ಬೆಲೆ ತುಸು ಹೆಚ್ಚಳಗೊಂಡಿದೆ. ಶುಕ್ರವಾರದವರೆಗೂ ಮೂರು ದಿನದಲ್ಲಿ 120 ರೂನಷ್ಟು ಇಳಿಕೆಯಾಗಿದ್ದ ಚಿನ್ನದ ಬೆಲೆ ವಾರಾಂತ್ಯದಲ್ಲಿ ಗ್ರಾಮ್​ಗೆ 40 ರೂನಷ್ಟು ಏರಿಕೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,100 ರೂ ಗಡಿ ದಾಟಿದೆ. ಅಪರಂಜಿ ಚಿನ್ನದ ಬೆಲೆ 7,745 ರೂಗೆ ಏರಿದೆ. ಬೆಳ್ಳಿ ಬೆಲೆಯೂ ಗ್ರಾಮ್​ಗೆ 1 ರೂ ಹೆಚ್ಚಳ ಆಗಿದೆ. ಗ್ರಾಮ್​ಗೆ 90.50 ರೂ ಇದ್ದ ಬೆಲೆ 91.50 ರೂಗೆ ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 71,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,450 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,150 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 71,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,150 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 22ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,450 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,090 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 915 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,450 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 915 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 71,000 ರೂ
  • ಚೆನ್ನೈ: 71,000 ರೂ
  • ಮುಂಬೈ: 71,000 ರೂ
  • ದೆಹಲಿ: 71,150 ರೂ
  • ಕೋಲ್ಕತಾ: 71,000 ರೂ
  • ಕೇರಳ: 71,000 ರೂ
  • ಅಹ್ಮದಾಬಾದ್: 71,050 ರೂ
  • ಜೈಪುರ್: 71,150 ರೂ
  • ಲಕ್ನೋ: 71,150 ರೂ
  • ಭುವನೇಶ್ವರ್: 71,000 ರೂ

ಇದನ್ನೂ ಓದಿ: ಈಕ್ವಿಟಿಯಿಂದ ಫೈನಾನ್ಸಿಂಗ್​ವರೆಗೆ, ಅತ್ಯಧಿಕ ಲಾಭ ತರುವ ಹೂಡಿಕೆ ಆಯ್ಕೆಗಳಿವು…

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (68,420 ರುಪಾಯಿ)
  • ದುಬೈ: 2,945 ಡಿರಾಮ್ (68,110 ರುಪಾಯಿ)
  • ಅಮೆರಿಕ: 780 ಡಾಲರ್ (66,260 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,080 ರುಪಾಯಿ)
  • ಕತಾರ್: 2,975 ಕತಾರಿ ರಿಯಾಲ್ (69,330 ರೂ)
  • ಸೌದಿ ಅರೇಬಿಯಾ: 3,000 ಸೌದಿ ರಿಯಾಲ್ (67,840 ರುಪಾಯಿ)
  • ಓಮನ್: 313 ಒಮಾನಿ ರಿಯಾಲ್ (69,060 ರುಪಾಯಿ)
  • ಕುವೇತ್: 240.80 ಕುವೇತಿ ದಿನಾರ್ (66,410 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,150 ರೂ
  • ಚೆನ್ನೈ: 9,900 ರೂ
  • ಮುಂಬೈ: 9,150 ರೂ
  • ದೆಹಲಿ: 9,150 ರೂ
  • ಕೋಲ್ಕತಾ: 9,150 ರೂ
  • ಕೇರಳ: 9,900 ರೂ
  • ಅಹ್ಮದಾಬಾದ್: 9,150 ರೂhttps://tv9kannada.com/webstories/business
  • ಜೈಪುರ್: 9,150 ರೂ
  • ಲಕ್ನೋ: 9,150 ರೂ
  • ಭುವನೇಶ್ವರ್: 9,900 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us