Gold Silver Price on 25 December: ಚಿನ್ನಕ್ಕೆ ಬೇಡಿಕೆ ಮುಂದುವರಿಕೆ; ಅಲ್ಪ ಪ್ರಮಾಣದಲ್ಲಿ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2023, December 25th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,490 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 79 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 58,200 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,675 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 25 December: ಚಿನ್ನಕ್ಕೆ ಬೇಡಿಕೆ ಮುಂದುವರಿಕೆ; ಅಲ್ಪ ಪ್ರಮಾಣದಲ್ಲಿ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
Edited By:

Updated on: Dec 25, 2023 | 5:00 AM

ಬೆಂಗಳೂರು, ಡಿಸೆಂಬರ್ 25: ಕಳೆದ ವಾರ ಯದ್ವ ದತ್ವ ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಈಗ ಮೆತ್ತಗಾಗಿದೆ. ಮಾರುಕಟ್ಟೆ ಸರಿಬೆಲೆ ಕಂಡುಕೊಳ್ಳುತ್ತಿದೆ. ಬೆಲೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇಲ್ಲದಿಲ್ಲ. ಅಮೆರಿಕದಲ್ಲಿ ಬಡ್ಡಿದರ ಇಳಿಯುವ ಸಾಧ್ಯತೆ ಇರುವುದರಿಂದ ಬಹಳಷ್ಟು ಹೂಡಿಕೆದಾರರು ಚಿನ್ನವನ್ನು ಹಿಡಿದಿಟ್ಟುಕೊಳ್ಳುತ್ತಿರುವುದರಿಂದ ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,200 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,490 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,900 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,675 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 25ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,490 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 790 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,200 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,490 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 767.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,200 ರೂ
  • ಚೆನ್ನೈ: 58,750 ರೂ
  • ಮುಂಬೈ: 58,200 ರೂ
  • ದೆಹಲಿ: 58,350 ರೂ
  • ಕೋಲ್ಕತಾ: 58,200 ರೂ
  • ಕೇರಳ: 58,200 ರೂ
  • ಅಹ್ಮದಾಬಾದ್: 58,250 ರೂ
  • ಜೈಪುರ್: 58,350 ರೂ
  • ಲಕ್ನೋ: 58,350 ರೂ
  • ಭುವನೇಶ್ವರ್: 58,200 ರೂ

ಇದನ್ನೂ ಓದಿ:

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 3,030 ರಿಂಗಿಟ್ (54,483 ರುಪಾಯಿ)
  • ದುಬೈ: 2,302.50 ಡಿರಾಮ್ (52,177 ರುಪಾಯಿ)
  • ಅಮೆರಿಕ: 630 ಡಾಲರ್ (52,433 ರುಪಾಯಿ)
  • ಸಿಂಗಾಪುರ: 845 ಸಿಂಗಾಪುರ್ ಡಾಲರ್ (53,131 ರುಪಾಯಿ)
  • ಕತಾರ್: 2,365 ಕತಾರಿ ರಿಯಾಲ್ (54,051 ರೂ)
  • ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,585 ರುಪಾಯಿ)
  • ಓಮನ್: 250 ಒಮಾನಿ ರಿಯಾಲ್ (54,078 ರುಪಾಯಿ)
  • ಕುವೇತ್: 197 ಕುವೇತಿ ದಿನಾರ್ (53,366 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,675 ರೂ
  • ಚೆನ್ನೈ: 8,050 ರೂ
  • ಮುಂಬೈ: 7,900 ರೂ
  • ದೆಹಲಿ: 7,900 ರೂ
  • ಕೋಲ್ಕತಾ: 7,900 ರೂ
  • ಕೇರಳ: 8,050 ರೂ
  • ಅಹ್ಮದಾಬಾದ್: 7,900 ರೂ
  • ಜೈಪುರ್: 7,900 ರೂ
  • ಲಕ್ನೋ: 7,900 ರೂ
  • ಭುವನೇಶ್ವರ್: 8,050 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us