ಬೆಂಗಳೂರು, ಡಿಸೆಂಬರ್ 26: ಭಾರೀ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆ (Gold and silver Rates) ಇಂದು ಯಥಾಸ್ಥಿತಿಯಲ್ಲಿದೆ. ಬೆಳ್ಳಿ ತುಸು ದುಬಾರಿ ಆಗಿದೆ. ಇವತ್ತು ಅಂತಾರಾಷ್ಟ್ರೀಯ ಚಿನಿವಾರ ಪೇಟೆಯಲ್ಲಿ ಒಂದಷ್ಟು ವ್ಯತ್ಯಯವಾಗುವ ನಿರೀಕ್ಷೆ ಇದ್ದು, ಚಿನ್ನದ ಬೆಲೆಯಲ್ಲಿ ಹೆಚ್ಚಳ ಆಗುವ ಸಾಧ್ಯತೆ ಕಾಣುತ್ತಿದೆ. ಬೆಳ್ಳಿ ಗ್ರಾಮ್ಗೆ 20 ಪೈಸೆಯಷ್ಟು ಮಾತ್ರವೇ ಹೆಚ್ಚಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 58,200 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,490 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,920 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 58,200 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,675 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಪೇಟಿಎಂನಲ್ಲಿ ಕೆಲಸ ಕಳೆದುಕೊಂಡ ಶೇ. 10ಕ್ಕೂ ಹೆಚ್ಚು ಉದ್ಯೋಗಿಗಳು; ಈ ವರ್ಷ ಕಂಡ ಅತಿದೊಡ್ಡ ಲೇ ಆಫ್ಗಳಲ್ಲಿ ಇದೂ ಒಂದು
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ