Gold Silver Price on 27 December: ಚಿನ್ನ, ಬೆಳ್ಳಿ ಎರಡರ ಬೆಲೆಯೂ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Dec 27, 2023 | 5:00 AM

Bullion Market 2023, December 27th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,710 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 79.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 58,400 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,675 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 27 December: ಚಿನ್ನ, ಬೆಳ್ಳಿ ಎರಡರ ಬೆಲೆಯೂ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Follow us on

ಬೆಂಗಳೂರು, ಡಿಸೆಂಬರ್ 27: ಚಿನ್ನ ಮತ್ತು ಬೆಳ್ಳಿ ಎರಡೂ ಬೆಲೆಗಳು (Gold and silver Rates) ಇಂದು ಹೆಚ್ಚಳಗೊಂಡಿವೆ. ಭಾರತದಲ್ಲಿ ಚಿನ್ನದ ಬೆಲೆ ಒಂದು ಗ್ರಾಮ್​ಗೆ 20 ರೂನಷ್ಟು ಹೆಚ್ಚಾಗಿದೆ. ವಿದೇಶಗಳಲ್ಲಿ ಹೆಚ್ಚಿನ ಕಡೆ ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾರತದಲ್ಲಿ ಬೆಳ್ಳಿ ಬೆಲೆಯೂ ಗ್ರಾಮ್​ಗೆ 30 ಪೈಸೆಯಷ್ಟು ದುಬಾರಿ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,710 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,950 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,675 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 27ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,710 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 795 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,710 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 767.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,400 ರೂ
  • ಚೆನ್ನೈ: 58,950 ರೂ
  • ಮುಂಬೈ: 58,400 ರೂ
  • ದೆಹಲಿ: 58,550 ರೂ
  • ಕೋಲ್ಕತಾ: 58,400 ರೂ
  • ಕೇರಳ: 58,400 ರೂ
  • ಅಹ್ಮದಾಬಾದ್: 58,450 ರೂ
  • ಜೈಪುರ್: 58,550 ರೂ
  • ಲಕ್ನೋ: 58,550 ರೂ
  • ಭುವನೇಶ್ವರ್: 58,400 ರೂ

ಇದನ್ನೂ ಓದಿ: Tips: ನಿವೃತ್ತಿಗೆ ಹಣ ಹೊಂದಿಸಬೇಕೆ? ಎಲ್ಲೆಲ್ಲಿ ಹೂಡಿಕೆ ಮಾಡಬೇಕು, ಈ ಸಲಹೆ ನಿಮಗೆ ಉಪಯುಕ್ತ ಎನಿಸಬಹುದು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 3,030 ರಿಂಗಿಟ್ (54,333 ರುಪಾಯಿ)
  • ದುಬೈ: 2,302.50 ಡಿರಾಮ್ (52,149 ರುಪಾಯಿ)
  • ಅಮೆರಿಕ: 630 ಡಾಲರ್ (52,404 ರುಪಾಯಿ)
  • ಸಿಂಗಾಪುರ: 845 ಸಿಂಗಾಪುರ್ ಡಾಲರ್ (53,096 ರುಪಾಯಿ)
  • ಕತಾರ್: 2,365 ಕತಾರಿ ರಿಯಾಲ್ (54,022 ರೂ)
  • ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,554 ರುಪಾಯಿ)
  • ಓಮನ್: 250 ಒಮಾನಿ ರಿಯಾಲ್ (54,049 ರುಪಾಯಿ)
  • ಕುವೇತ್: 197 ಕುವೇತಿ ದಿನಾರ್ (53,295 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,675 ರೂ
  • ಚೆನ್ನೈ: 8,100 ರೂ
  • ಮುಂಬೈ: 7,950 ರೂ
  • ದೆಹಲಿ: 7,950 ರೂ
  • ಕೋಲ್ಕತಾ: 7,950 ರೂ
  • ಕೇರಳ: 8,100 ರೂ
  • ಅಹ್ಮದಾಬಾದ್: 7,950 ರೂ
  • ಜೈಪುರ್: 7,950 ರೂ
  • ಲಕ್ನೋ: 7,950 ರೂ
  • ಭುವನೇಶ್ವರ್: 8,100 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ