ಬೆಂಗಳೂರು, ಡಿಸೆಂಬರ್ 02: ನಿರೀಕ್ಷೆಯಂತೆ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಮತ್ತೆ ಏರತೊಡಗಿವೆ. ಚಿನ್ನ ಗ್ರಾಮ್ಗೆ 20 ರೂ ಏರಿದರೆ, ಬೆಳ್ಳಿ ಬೆಲೆ ಗ್ರಾಮ್ಗೆ 30 ಪೈಸೆಯಷ್ಟು ಹೆಚ್ಚಿದೆ. ಹೆಚ್ಚಿನ ಹೂಡಿಕೆದಾರರು ಡಾಲರ್ ಬಿಟ್ಟು ಚಿನ್ನ ಹಾಗೂ ಷೇರುಗಳತ್ತ ಮುಗಿಬೀಳುತ್ತಿದ್ದಾರೆ. ಇದು ಚಿನ್ನಕ್ಕೆ ಬೇಡಿಕೆ ಹೆಚ್ಚಿಸಿದೆ. ಮೇಲಾಗಿ ಭಾರತದಲ್ಲಿ ಈಗ ಮದುವೆ ಸೀಸನ್ ಕೂಡ ಹೌದು. ಇದು ಇನ್ನಷ್ಟು ಹೆಚ್ಚಿನ ಬೇಡಿಕೆ ಸೃಷ್ಟಿಸುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,850 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,950 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,800 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: 8th Pay Commission: ಎಲೆಕ್ಷನ್ ಬಂತು, 8ನೇ ವೇತನ ಆಯೋಗ ರಚನೆಯಾಗುತ್ತಾ? ಸರ್ಕಾರದಿಂದ ಅಪ್ಡೇಟ್ ಇದು
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ