Gold Silver Price on 3rd December: ಬೆಂಗಳೂರಿನಲ್ಲಿ ಚಿನ್ನದ ಬೆಲೆ 40 ರೂ ಏರಿಕೆ

Bullion Market 2024 December 3rd: ಚಿನ್ನದ ಬೆಲೆಯ ಏರಿಳಿತ ಆಟ ಮುಂದುವರಿದಿದೆ. ಇವತ್ತು ಮಂಗಳವಾರ ಚಿನ್ನದ ಬೆಲೆ ಗ್ರಾಮ್​ಗೆ 40 ರೂ ಏರಿಕೆ ಆಗಿದೆ. ಬೆಂಗಳೂರು ಮೊದಲಾದೆಡೆ 22 ಕ್ಯಾರಟ್ ಚಿನ್ನದ ಬೆಲೆ 7,130 ರೂಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ 7,778 ರೂ ಆಗಿದೆ. ಬೆಳ್ಳಿ ಬೆಲೆ 91 ರೂ ಮತ್ತು 99.50 ರೂನಲ್ಲಿ ಮುಂದುವರಿದಿದೆ.

Gold Silver Price on 3rd December: ಬೆಂಗಳೂರಿನಲ್ಲಿ ಚಿನ್ನದ ಬೆಲೆ 40 ರೂ ಏರಿಕೆ
ಚಿನ್ನ

Updated on: Dec 03, 2024 | 10:35 AM

ಬೆಂಗಳೂರು, ಡಿಸೆಂಬರ್ 3: ನಿನ್ನೆ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇವತ್ತು ಮಂಗಳವಾರ ಗ್ರಾಮ್​ಗೆ 40 ರೂನಷ್ಟು ಹೆಚ್ಚಳವಾಗಿದೆ. 7,090 ರೂ ಇದ್ದ 22 ಕ್ಯಾರಟ್ ಚಿನ್ನದ ಬೆಲೆ ಈಗ 7,130 ರೂ ತಲುಪಿದೆ. ಅಪರಂಜಿ ಚಿನ್ನದ ಬೆಲೆ 7,778 ರೂ ಆಗಿದೆ. ವಿದೇಶಗಳಲ್ಲಿ ಕೆಲವೆಡೆ ಬೆಲೆಯಲ್ಲಿ ಏರಿಕೆ ಆಗಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಇವತ್ತು ವ್ಯತ್ಯಯವಾಗಿಲ್ಲ. ನಿನ್ನೆ ಬೆಂಗಳೂರು ಮೊದಲಾದೆಡೆ ಬೆಳ್ಳಿ ಬೆಲೆ 91 ರೂಗೆ ಇಳಿದಿತ್ತು. ಇವತ್ತೂ ಅದೇ ದರ ಮುಂದುವರಿದಿದೆ. ಚೆನ್ನೈ ಮೊದಲಾದೆಡೆ ಬೆಳ್ಳಿ ಬೆಲೆ 99.50 ರೂ ಇದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 71,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 77,780 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 71,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 3ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,780 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,340 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 91 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 71,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 77,780 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 91 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 71,300 ರೂ
  • ಚೆನ್ನೈ: 71,300 ರೂ
  • ಮುಂಬೈ: 71,300 ರೂ
  • ದೆಹಲಿ: 71,450 ರೂ
  • ಕೋಲ್ಕತಾ: 71,300 ರೂ
  • ಕೇರಳ: 71,300 ರೂ
  • ಅಹ್ಮದಾಬಾದ್: 71,350 ರೂ
  • ಜೈಪುರ್: 71,450 ರೂ
  • ಲಕ್ನೋ: 71,450 ರೂ
  • ಭುವನೇಶ್ವರ್: 71,300 ರೂ

ಇದನ್ನೂ ಓದಿ: Petrol Diesel Price on December 03: ಬಿಹಾರದಲ್ಲಿ ಪೆಟ್ರೋಲ್ ದುಬಾರಿ, ಮಹಾರಾಷ್ಟ್ರದಲ್ಲಿ ಇಳಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (68,810 ರುಪಾಯಿ)
  • ದುಬೈ: 2,967.50 ಡಿರಾಮ್ (68,460 ರುಪಾಯಿ)
  • ಅಮೆರಿಕ: 780 ಡಾಲರ್ (66,090 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,330 ರುಪಾಯಿ)
  • ಕತಾರ್: 3,000 ಕತಾರಿ ರಿಯಾಲ್ (69,740 ರೂ)
  • ಸೌದಿ ಅರೇಬಿಯಾ: 3,030 ಸೌದಿ ರಿಯಾಲ್ (68,340 ರುಪಾಯಿ)
  • ಓಮನ್: 315.50 ಒಮಾನಿ ರಿಯಾಲ್ (69,430 ರುಪಾಯಿ)
  • ಕುವೇತ್: 242.30 ಕುವೇತಿ ದಿನಾರ್ (66,740 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,100 ರೂ
  • ಚೆನ್ನೈ: 9,950 ರೂ
  • ಮುಂಬೈ: 9,100 ರೂ
  • ದೆಹಲಿ: 9,100 ರೂ
  • ಕೋಲ್ಕತಾ: 9,100 ರೂ
  • ಕೇರಳ: 9,950 ರೂ
  • ಅಹ್ಮದಾಬಾದ್: 9,100 ರೂ
  • ಜೈಪುರ್: 9,100 ರೂ
  • ಲಕ್ನೋ: 9,100 ರೂ
  • ಭುವನೇಶ್ವರ್: 9,950 ರೂ

ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us