Gold Silver Price on 04 December: ಭಾರತ ಹಾಗು ವಿದೇಶಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಗಗನಕ್ಕೇರುವುದು ಮುಂದುವರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2023, December 4th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,760 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 80.05 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 58,450 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,800 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 04 December: ಭಾರತ ಹಾಗು ವಿದೇಶಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಗಗನಕ್ಕೇರುವುದು ಮುಂದುವರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Follow us
TV9 Web
| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Dec 04, 2023 | 5:10 AM

ಬೆಂಗಳೂರು, ಡಿಸೆಂಬರ್ 04: ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and silver Rates) ಏರಿಕೆ ಈ ವಾರವೂ ಮುಂದುವರಿಯುತ್ತಿದೆ. ಕಳೆದ ಒಂದು ವಾರದಿಂದ ಈ ಎರಡೂ ಲೋಹಗಳ ಬೆಲೆ ಬಹಳ ತೀವ್ರ ಗತಿಯಲ್ಲಿ ಹೆಚ್ಚಳಗೊಂಡಿದೆ. ಕಳೆದ ಕೆಲ ದಿನಗಳಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 70 ರೂಗಿಂತಲೂ ಮೇಲೇರಿದೆ. ಮಲೇಷ್ಯಾದಲ್ಲಿ ಮಾತ್ರ ಕೆಲ ತಿಂಗಳಿಂದ ಬೆಲೆ ಸ್ಥಿರವಾಗಿದೆ. ಅದು ಬಿಟ್ಟರೆ ಉಳಿದ ಕಡೆ ಬೆಲೆಯಲ್ಲಿ ನಿತ್ಯವೂ ವ್ಯತ್ಯಯವಾಗಿದೆ. ಹೆಚ್ಚಿನ ಹೂಡಿಕೆದಾರರು ಡಾಲರ್ ಬಿಟ್ಟು ಚಿನ್ನ ಹಾಗೂ ಷೇರುಗಳತ್ತ ಮುಗಿಬೀಳುತ್ತಿದ್ದಾರೆ. ಇದು ಚಿನ್ನಕ್ಕೆ ಬೇಡಿಕೆ ಹೆಚ್ಚಿಸಿದೆ. ಮೇಲಾಗಿ ಭಾರತದಲ್ಲಿ ಈಗ ಮದುವೆ ಸೀಸನ್ ಕೂಡ ಹೌದು. ಇದು ಇನ್ನಷ್ಟು ಹೆಚ್ಚಿನ ಬೇಡಿಕೆ ಸೃಷ್ಟಿಸುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,760 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,050 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,800 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಡಿಸೆಂಬರ್ 4ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,760 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 805 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,450 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,760 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 780 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,450 ರೂ
  • ಚೆನ್ನೈ: 59,150 ರೂ
  • ಮುಂಬೈ: 58,450 ರೂ
  • ದೆಹಲಿ: 58,600 ರೂ
  • ಕೋಲ್ಕತಾ: 58,450 ರೂ
  • ಕೇರಳ: 58,450 ರೂ
  • ಅಹ್ಮದಾಬಾದ್: 58,500 ರೂ
  • ಜೈಪುರ್: 58,600 ರೂ
  • ಲಕ್ನೋ: 58,600 ರೂ
  • ಭುವನೇಶ್ವರ್: 58,450 ರೂ

ಇದನ್ನೂ ಓದಿ: ಪೋಸ್ಟ್ ಆಫೀಸ್​ನಲ್ಲಿ ನಿಮ್ಮ ಹಳೆಯ ನಿಷ್ಕ್ರಿಯ ಸೇವಿಂಗ್ಸ್ ಖಾತೆ ಮತ್ತೆ ಸಕ್ರಿಯಗೊಳಿಸುವ ಕ್ರಮ ತಿಳಿಯಿರಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 2,980 ರಿಂಗಿಟ್ (53,092 ರುಪಾಯಿ)
  • ದುಬೈ: 2,327.50 ಡಿರಾಮ್ (52,771 ರುಪಾಯಿ)
  • ಅಮೆರಿಕ: 635 ಡಾಲರ್ (52,873 ರುಪಾಯಿ)
  • ಸಿಂಗಾಪುರ: 859 ಸಿಂಗಾಪುರ್ ಡಾಲರ್ (53,638 ರುಪಾಯಿ)
  • ಕತಾರ್: 2,385 ಕತಾರಿ ರಿಯಾಲ್ (54,495 ರೂ)
  • ಸೌದಿ ಅರೇಬಿಯಾ: 2,390 ಸೌದಿ ರಿಯಾಲ್ (53,049 ರುಪಾಯಿ)
  • ಓಮನ್: 252.50 ಒಮಾನಿ ರಿಯಾಲ್ (54,468 ರುಪಾಯಿ)
  • ಕುವೇತ್: 199 ಕುವೇತಿ ದಿನಾರ್ (53,696 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,900 ರೂ
  • ಚೆನ್ನೈ: 8,350 ರೂ
  • ಮುಂಬೈ: 8,050 ರೂ
  • ದೆಹಲಿ: 8,050 ರೂ
  • ಕೋಲ್ಕತಾ: 8,050 ರೂ
  • ಕೇರಳ: 8,350 ರೂ
  • ಅಹ್ಮದಾಬಾದ್: 8,050 ರೂ
  • ಜೈಪುರ್: 8,050 ರೂ
  • ಲಕ್ನೋ: 8,050 ರೂ
  • ಭುವನೇಶ್ವರ್: 8,350 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು