ಬೆಂಗಳೂರು, ಡಿಸೆಂಬರ್ 04: ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and silver Rates) ಏರಿಕೆ ಈ ವಾರವೂ ಮುಂದುವರಿಯುತ್ತಿದೆ. ಕಳೆದ ಒಂದು ವಾರದಿಂದ ಈ ಎರಡೂ ಲೋಹಗಳ ಬೆಲೆ ಬಹಳ ತೀವ್ರ ಗತಿಯಲ್ಲಿ ಹೆಚ್ಚಳಗೊಂಡಿದೆ. ಕಳೆದ ಕೆಲ ದಿನಗಳಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 70 ರೂಗಿಂತಲೂ ಮೇಲೇರಿದೆ. ಮಲೇಷ್ಯಾದಲ್ಲಿ ಮಾತ್ರ ಕೆಲ ತಿಂಗಳಿಂದ ಬೆಲೆ ಸ್ಥಿರವಾಗಿದೆ. ಅದು ಬಿಟ್ಟರೆ ಉಳಿದ ಕಡೆ ಬೆಲೆಯಲ್ಲಿ ನಿತ್ಯವೂ ವ್ಯತ್ಯಯವಾಗಿದೆ. ಹೆಚ್ಚಿನ ಹೂಡಿಕೆದಾರರು ಡಾಲರ್ ಬಿಟ್ಟು ಚಿನ್ನ ಹಾಗೂ ಷೇರುಗಳತ್ತ ಮುಗಿಬೀಳುತ್ತಿದ್ದಾರೆ. ಇದು ಚಿನ್ನಕ್ಕೆ ಬೇಡಿಕೆ ಹೆಚ್ಚಿಸಿದೆ. ಮೇಲಾಗಿ ಭಾರತದಲ್ಲಿ ಈಗ ಮದುವೆ ಸೀಸನ್ ಕೂಡ ಹೌದು. ಇದು ಇನ್ನಷ್ಟು ಹೆಚ್ಚಿನ ಬೇಡಿಕೆ ಸೃಷ್ಟಿಸುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 58,450 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,760 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,050 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 58,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,800 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಪೋಸ್ಟ್ ಆಫೀಸ್ನಲ್ಲಿ ನಿಮ್ಮ ಹಳೆಯ ನಿಷ್ಕ್ರಿಯ ಸೇವಿಂಗ್ಸ್ ಖಾತೆ ಮತ್ತೆ ಸಕ್ರಿಯಗೊಳಿಸುವ ಕ್ರಮ ತಿಳಿಯಿರಿ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ