ಬೆಂಗಳೂರು, ಡಿಸೆಂಬರ್ 05: ಚಿನ್ನದ ಬೆಲೆಗಳು (Gold and silver Rates) ರಾಕೆಟ್ನಂತೆ ಏರುತ್ತಿದೆ. ಕಳೆದ ಕೆಲ ತಿಂಗಳುಗಳಿಂದ ಸಾಕಷ್ಟು ಏರಿಳಿತಗಳನ್ನು ಕಂಡರೂ ಚಿನ್ನದ ಬೆಲೆಯಲ್ಲಿ ಅಷ್ಟೇನೂ ವ್ಯತ್ಯಾಸವಾಗಿರಲಿಲ್ಲ. ಈಗ ಅಮೆರಿಕದ ಆರ್ಥಿಕತೆ ಕಳೆ ಹೆಚ್ಚತೊಡಗುತ್ತಿದ್ದಂತೆಯೇ ಚಿನ್ನ ಮತ್ತು ಷೇರುಗಳಿಗೆ ಬೇಡಿಕೆ ಹೆಚ್ಚಿದೆ. ಚಿನ್ನದ ಬೆಲೆ ತೀವ್ರಗತಿಯಲ್ಲಿ ಮೇಲೇರುತ್ತಿದೆ. ಚಿನ್ನದ ಬೆಲೆ ಗ್ರಾಮ್ಗೆ 40 ರೂನಷ್ಟು ಏರಿದೆ. ಕಳೆದ ಕೆಲ ತಿಂಗಳಿಂದ ಚಿನ್ನದ ಬೆಲೆ ಏರಿಕೆ ಕಾಣದ ಮಲೇಷ್ಯಾದಲ್ಲೂ ದಿಢೀರ್ ಬೆಲೆ ಏರಿಕೆ ಆಗಿದೆ. ಸಿಂಗಾಪುರದಲ್ಲಿ ಭಾರತಕ್ಕಿಂತಲೂ ಚಿನ್ನ ದುಬಾರಿ ಆಗಿ ಹೋಗಿದೆ. ಹೆಚ್ಚಿನ ದೇಶಗಳಲ್ಲಿ ಚಿನ್ನದ ಬೆಲೆ ಭಾರತದ ಮಟ್ಟಕ್ಕೆ ಬಂದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 58,850 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 64,200 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 8,050 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 58,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,900 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಚಿನ್ನ ಖರೀದಿಸಲು ಮುಂದಾಗಿದ್ದೀರಾ? ತೆರಿಗೆ ನಿಯಮ, ಹೂಡಿಕೆ ಆಯ್ಕೆ ಇತ್ಯಾದಿ ವಿವರ ತಿಳಿಯಿರಿ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ