ಬೆಂಗಳೂರು, ಡಿಸೆಂಬರ್ 06: ದಿಢೀರನೇ ರಾಕೆಟ್ನಂತೆ ಜಿಗಿದಿದ್ದ ಚಿನ್ನದ ಬೆಲೆ (Gold and silver Rates) ಇಂದು ಕಡಿಮೆಗೊಂಡಿದೆ. ಮದುವೆ ಸೀಸನ್ನಲ್ಲಿ ಹುಚ್ಚಾಪಟ್ಟೆ ಚಿನ್ನದ ಬೆಲೆ ಏರಿಕೆ ಆಗಿದ್ದರಿಂದ ಬಹಳ ಭಾರತೀಯರು ಆಘಾತಗೊಂಡಿದ್ದರು. ನಿನ್ನೆ ದಾಖಲೆ ಮಟ್ಟಕ್ಕೆ ಚಿನ್ನದ ಬೆಲೆ ಹೋಗಿತ್ತು. ಈಗ ತುಸು ಕಡಿಮೆ ಆಗಿರುವುದು ಗಮನಾರ್ಹ. ಗ್ರಾಮ್ಗೆ 100 ರೂನಷ್ಟು ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,850 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,110 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,850 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,850 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,925 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Bengaluru Airport: ಹೆಚ್ಚಿನ ಭಾರತೀಯ ವಿಮಾನ ನಿಲ್ದಾಣಗಳು ನಷ್ಟದಲ್ಲಿ; ಬೆಂಗಳೂರು ಏರ್ಪೋರ್ಟ್ ಅತಿಹೆಚ್ಚು ಲಾಭದಾಯಕ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ