ಬೆಂಗಳೂರು, ಡಿಸೆಂಬರ್ 07: ಕಳೆದ ವಾರ ಹಾಗೂ ಈ ವಾರದ ಆರಂಭದಲ್ಲಿ ಸಖತ್ ಜಿಗಿತ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಮತ್ತೆ ಇಳಿದಿವೆ. ಇದರೊಂದಿಗೆ ಆಭರಣ ಪ್ರಿಯ ಭಾರತೀಯರು ಮತ್ತು ಚಿನ್ನದ ಮೇಲೆ ಹೂಡಿಕೆ ಮಾಡಲು ನಿರ್ಧರಿಸಿದವರಿಗೆ ತುಸು ನಿರಾಳವಾಗಿದೆ. ಈ ಎರಡೂ ಲೋಹಗಳ ಬೆಲೆ ಗಣನೀಯವಾಗಿ ಇಳಿಯುತ್ತಿದೆ. ಚಿನ್ನದ ಬೆಲೆ ಗ್ರಾಮ್ಗೆ 40 ರೂನಷ್ಟು ಇಳಿದರೆ, ಬೆಳ್ಳಿಗೆ ಬೆಲೆ ಗ್ರಾಮ್ಗೆ 30 ಪೈಸೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,450 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,670 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,820 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,725 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Post Office Fixed Deposit: ಪೋಸ್ಟ್ ಆಫೀಸ್ ಎಫ್ಡಿ ಹಣ ಹಿಂಪಡೆಯುವ ಮುನ್ನ ಈ ಮಹತ್ವದ ನಿಯಮ ಬದಲಾವಣೆ ತಿಳಿದಿರಿ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ