AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಬೆಂಗಳೂರಲ್ಲಿ ಚಿನ್ನ, ಬೆಳ್ಳಿ ಎರಡೂ ಬೆಲೆ ಏರಿಕೆ

Bullion Market 2024 February 14th: ಇವತ್ತು ವಾರದ ಆರಂಭದಿಂದ ಏರಿಳಿತಗಳನ್ನು ಕಾಣುತ್ತಿರುವ ಚಿನ್ನದ ಬೆಲೆ ಇಂದು ಶುಕ್ರವಾರ ಸತತ ಎರಡನೇ ಬಾರಿ ಹೆಚ್ಚಳವಾಗಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 10 ರೂ ಏರಿಕೆ ಆಗಿದೆ. 7,980 ರೂ ಇದ್ದ ಅದರ ಬೆಲೆ 7,990 ರೂಗೆ ಏರಿದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ ಒಂದು ರೂ ಹೆಚ್ಚಿದೆ. ಬೆಂಗಳೂರಿನಲ್ಲಿ ಅದರ ಬೆಲೆ ನೂರು ರೂ ಗಡಿ ದಾಟಿದೆ.

Gold Rate Today Bangalore: ಬೆಂಗಳೂರಲ್ಲಿ ಚಿನ್ನ, ಬೆಳ್ಳಿ ಎರಡೂ ಬೆಲೆ ಏರಿಕೆ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 14, 2025 | 1:06 PM

Share

ಬೆಂಗಳೂರು, ಫೆಬ್ರುವರಿ 14: ಚಿನ್ನದ ಬೆಲೆ ಇಂದು ಶುಕ್ರವಾರ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಆಭರಣ ಚಿನ್ನದ ಬೆಲೆ 7,990 ರೂಗೆ ಏರಿದೆ. ಜೈಪುರ್, ಲಕ್ನೋ ಮೊದಲಾದ ಕೆಲವೆಡೆ 22 ಕ್ಯಾರಟ್ ಚಿನ್ನದ ಬೆಲೆ 8,000 ರೂ ಗಡಿ ದಾಟಿ ಹೋಗಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಗ್ರಾಮ್​ಗೆ ನೂರು ರೂ ಗಡಿ ದಾಟಿದೆ. ಕಿಲೋ ಬೆಳ್ಳಿ ಬೆಲೆ ಒಂದು ಲಕ್ಷ ರೂಗೂ ಹೆಚ್ಚಿದೆ. ಚೆನ್ನೈ ಮೊದಲಾದ ಹಲವೆಡೆ ಬೆಳ್ಳಿ ಬೆಲೆ ಗ್ರಾಮ್​ಗೆ 107 ರೂಗೆ ಏರಿದೆ. ವಿದೇಶಗಳ ಪೈಕಿ ಯುಎಇ, ಸೌದಿ ಇತ್ಯಾದಿ ದೇಶಗಳಲ್ಲಿ ಚಿನ್ನದ ಬೆಲೆ ಗಣನೀಯವಾಗಿ ಏರಿಕೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 79,900 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 87,160 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,050 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 79,900 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,050 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 14ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,160 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,005 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,900 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,160 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,005 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 79,900 ರೂ
  • ಚೆನ್ನೈ: 79,900 ರೂ
  • ಮುಂಬೈ: 79,900 ರೂ
  • ದೆಹಲಿ: 80,050 ರೂ
  • ಕೋಲ್ಕತಾ: 79,900 ರೂ
  • ಕೇರಳ: 79,900 ರೂ
  • ಅಹ್ಮದಾಬಾದ್: 79,950 ರೂ
  • ಜೈಪುರ್: 80,050 ರೂ
  • ಲಕ್ನೋ: 80,050 ರೂ
  • ಭುವನೇಶ್ವರ್: 79,900 ರೂ

ಇದನ್ನೂ ಓದಿ: EPF rate: ಆರ್​ಬಿಐ ದರ ಕಡಿಮೆಗೊಳಿಸಿದ್ದರಿಂದ ಇಪಿಎಫ್​ಒ ಬಡ್ಡಿಯೂ ಕಡಿಮೆ ಆಗುತ್ತಾ? ಈ ವರ್ಷಕ್ಕೆ ಎಷ್ಟಿರಬಹುದು ಬಡ್ಡಿದರ? ಇಲ್ಲಿದೆ ಡೀಟೇಲ್ಸ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (71,010 ರುಪಾಯಿ)
  • ದುಬೈ: 3,282.50 ಡಿರಾಮ್ (77,640 ರುಪಾಯಿ)
  • ಅಮೆರಿಕ: 780 ಡಾಲರ್ (67,760 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (70,220 ರುಪಾಯಿ)
  • ಕತಾರ್: 3,290 ಕತಾರಿ ರಿಯಾಲ್ (78,400 ರೂ)
  • ಸೌದಿ ಅರೇಬಿಯಾ: 3,320 ಸೌದಿ ರಿಯಾಲ್ (76,890 ರುಪಾಯಿ)
  • ಓಮನ್: 348 ಒಮಾನಿ ರಿಯಾಲ್ (78,520 ರುಪಾಯಿ)
  • ಕುವೇತ್: 269.20 ಕುವೇತಿ ದಿನಾರ್ (75,820 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,050 ರೂ
  • ಚೆನ್ನೈ: 10,800 ರೂ
  • ಮುಂಬೈ: 10,050 ರೂ
  • ದೆಹಲಿ: 10,050 ರೂ
  • ಕೋಲ್ಕತಾ: 10,050 ರೂ
  • ಕೇರಳ: 10,800 ರೂ
  • ಅಹ್ಮದಾಬಾದ್: 10,050 ರೂ
  • ಜೈಪುರ್: 10,050 ರೂ
  • ಲಕ್ನೋ: 10,050 ರೂ
  • ಭುವನೇಶ್ವರ್: 10,800 ರೂ
  • ಪುಣೆ: 10,050

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!