AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 14th February: ಚಿನ್ನದ ಬೆಲೆ ತುಸು ಇಳಿಕೆ; ಬೆಳ್ಳಿ ಯಥಾಸ್ಥಿತಿ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2024, February 14th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,840 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,600 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,275 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 14th February: ಚಿನ್ನದ ಬೆಲೆ ತುಸು ಇಳಿಕೆ; ಬೆಳ್ಳಿ ಯಥಾಸ್ಥಿತಿ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
TV9 Web
| Edited By: |

Updated on: Feb 14, 2024 | 5:00 AM

Share

ಬೆಂಗಳೂರು, ಫೆಬ್ರುವರಿ 14: ಭಾರತದಲ್ಲಿ ಚಿನ್ನದ ಬೆಲೆ (Gold and silver Rates) ಇಂದು ಇಳಿಕೆ ಕಂಡಿದೆ. ನಿನ್ನೆ ಬೆಳ್ಳಿ ಬೆಲೆ ಇಳಿದು ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿತ್ತು. ಇವತ್ತು ಬೆಳ್ಳಿ ಬೆಲೆ ಯಥಾಸ್ಥಿತಿಯಲ್ಲಿದೆ. ಸ್ವರ್ಣ ಬೆಲೆ ಗ್ರಾಮ್​ಗೆ 10 ರೂನಷ್ಟು ಕಡಿಮೆ ಆಗಿದೆ. ವಿದೇಶಗಳ ಮಾರುಕಟ್ಟೆಗಳಲ್ಲಿಯೂ ಚಿನ್ನದ ಬೆಲೆ ತುಸು ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,275 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 14ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,840 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,840 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 727.50 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,600 ರೂ
  • ಚೆನ್ನೈ: 58,100 ರೂ
  • ಮುಂಬೈ: 57,600 ರೂ
  • ದೆಹಲಿ: 57,750 ರೂ
  • ಕೋಲ್ಕತಾ: 57,600 ರೂ
  • ಕೇರಳ: 57,600 ರೂ
  • ಅಹ್ಮದಾಬಾದ್: 57,650 ರೂ
  • ಜೈಪುರ್: 57,750 ರೂ
  • ಲಕ್ನೋ: 57,750 ರೂ
  • ಭುವನೇಶ್ವರ್: 57,600 ರೂ

ಇದನ್ನೂ ಓದಿ: ರೈತರ ಆದಾಯ ಹೆಚ್ಚಿಸಲು ಸರ್ಕಾರ ಕೈಗೊಂಡ 9 ಯೋಜನೆಗಳಿವು…

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,080 ರಿಂಗಿಟ್ (53,669 ರುಪಾಯಿ)
  • ದುಬೈ: 2,270 ಡಿರಾಮ್ (51,292 ರುಪಾಯಿ)
  • ಅಮೆರಿಕ: 620 ಡಾಲರ್ (51,459 ರುಪಾಯಿ)
  • ಸಿಂಗಾಪುರ: 845 ಸಿಂಗಾಪುರ್ ಡಾಲರ್ (52,148 ರುಪಾಯಿ)
  • ಕತಾರ್: 2,330 ಕತಾರಿ ರಿಯಾಲ್ (53,017 ರೂ)
  • ಸೌದಿ ಅರೇಬಿಯಾ: 2,340 ಸೌದಿ ರಿಯಾಲ್ (51,788 ರುಪಾಯಿ)
  • ಓಮನ್: 246 ಒಮಾನಿ ರಿಯಾಲ್ (53,030 ರುಪಾಯಿ)
  • ಕುವೇತ್: 194.50 ಕುವೇತಿ ದಿನಾರ್ (52,428 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,275 ರೂ
  • ಚೆನ್ನೈ: 7,700 ರೂ
  • ಮುಂಬೈ: 7,550 ರೂ
  • ದೆಹಲಿ: 7,550 ರೂ
  • ಕೋಲ್ಕತಾ: 7,550 ರೂ
  • ಕೇರಳ: 7,700 ರೂ
  • ಅಹ್ಮದಾಬಾದ್: 7,550 ರೂ
  • ಜೈಪುರ್: 7,550 ರೂ
  • ಲಕ್ನೋ: 7,550 ರೂ
  • ಭುವನೇಶ್ವರ್: 7,700 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?