Gold Silver Price on 18th February: ಪ್ರಮುಖ ದೇಶಗಳ ಆರ್ಥಿಕ ಹಿಂಜರಿತದ ಪರಿಣಾಮ, ಚಿನ್ನ, ಬೆಳ್ಳಿ ಬೆಲೆಗಳಲ್ಲಿ ಏರಿಕೆ
Bullion Market 2024: ಬ್ರಿಟನ್ ಮತ್ತು ಜಪಾನ್ ಮೊದಲಾದ ಪ್ರಮುಖ ದೇಶಗಳಲ್ಲಿನ ಆರ್ಥಿಕ ಹಿಂಜರಿತವು ಬಹಳಷ್ಟು ಹೂಡಿಕೆದಾರರ ಎದೆ ನಡುಗಿಸಿದ್ದು, ಅದರ ಪರಿಣಾಮವಾಗಿ ಚಿನ್ನಕ್ಕೆ ಮತ್ತೆ ಬೇಡಿಕೆ ಶುರುವಾಗಿದೆ. ಚಿನ್ನದ ಬೆಲೆ ಇಂದು ಗ್ರಾಮ್ಗೆ 20 ರೂನಷ್ಟು ಏರಿಕೆ ಆಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ ಒಂದು ರೂನಷ್ಟು ಹೆಚ್ಚಾಗಿದೆ. ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,290 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್ಗೆ 75.60 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಮ್ ಚಿನ್ನದ ಬೆಲೆ 57,100 ರೂ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,090 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.
ಬೆಂಗಳೂರು, ಫೆಬ್ರುವರಿ 18: ಚಿನ್ನ ಮತ್ತು ಬೆಳ್ಳಿ ಬೆಲೆಗಳ (Gold and silver Rates) ಹೊಯ್ದಾಟ ಮುಂದುವರಿದಿದೆ. ಕಳೆದ ವಾರದಂತೆ ಈ ವಾರವೂ ಬೆಲೆಗಳಲ್ಲಿ ವ್ಯತ್ಯಯವಾಗಿದೆ. ಚಿನ್ನದ ಬೆಲೆ ವಾರಾಂತ್ಯದಲ್ಲಿ ಗ್ರಾಮ್ಗೆ 20 ರೂನಷ್ಟು ಏರಿಕೆಯಾಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ ಒಂದು ರುಪಾಯಿಯಷ್ಟು ಹೆಚ್ಚಳವಾಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ್ಲೂ ಚಿನ್ನದ ಬೆಲೆ ಏರಿಕೆ ಆಗಿದೆ. ಬ್ರಿಟನ್ ಆರ್ಥಿಕ ಹಿಂಜರಿತ, ಜಪಾನ್ ಆರ್ಥಿಕ ಹಿಂಜರಿತದ ಪರಿಣಾಮವಾಗಿ ಚಿನ್ನದ ಮೇಲೆ ಹೂಡಿಕೆ ಹೆಚ್ಚುತ್ತಿರುವಂತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,100 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,290 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,560 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,090 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 18ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,100 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,290 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 756 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,100 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,290 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 709 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 57,100 ರೂ
- ಚೆನ್ನೈ: 57,600 ರೂ
- ಮುಂಬೈ: 57,100 ರೂ
- ದೆಹಲಿ: 57,250 ರೂ
- ಕೋಲ್ಕತಾ: 57,100 ರೂ
- ಕೇರಳ: 57,100 ರೂ
- ಅಹ್ಮದಾಬಾದ್: 57,150 ರೂ
- ಜೈಪುರ್: 57,250 ರೂ
- ಲಕ್ನೋ: 57,250 ರೂ
- ಭುವನೇಶ್ವರ್: 57,100 ರೂ
ಇದನ್ನೂ ಓದಿ: ಜೀವನದಲ್ಲಿ ಸಾಧನೆ ಮಾಡಬೇಕೆ? ಬುದ್ಧಿಯಲ್ಲ, ಮನಸಿನ ಮಾತಿಗೆ ಕಿವಿಗೊಡಿ: ಗೂಗಲ್ ಸಿಇಒ ಸುಂದರ್ ಪಿಚೈ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಮಲೇಷ್ಯಾ: 3,060 ರಿಂಗಿಟ್ (53,143 ರುಪಾಯಿ)
- ದುಬೈ: 2,247.50 ಡಿರಾಮ್ (50,796 ರುಪಾಯಿ)
- ಅಮೆರಿಕ: 610 ಡಾಲರ್ (50,637 ರುಪಾಯಿ)
- ಸಿಂಗಾಪುರ: 840 ಸಿಂಗಾಪುರ್ ಡಾಲರ್ (51,816 ರುಪಾಯಿ)
- ಕತಾರ್: 2,310 ಕತಾರಿ ರಿಯಾಲ್ (52,588 ರೂ)
- ಸೌದಿ ಅರೇಬಿಯಾ: 2,310 ಸೌದಿ ರಿಯಾಲ್ (51,132 ರುಪಾಯಿ)
- ಓಮನ್: 244.50 ಒಮಾನಿ ರಿಯಾಲ್ (52,720 ರುಪಾಯಿ)
- ಕುವೇತ್: 192.50 ಕುವೇತಿ ದಿನಾರ್ (51,885 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 7,090 ರೂ
- ಚೆನ್ನೈ: 7,700 ರೂ
- ಮುಂಬೈ: 7,560 ರೂ
- ದೆಹಲಿ: 7,560 ರೂ
- ಕೋಲ್ಕತಾ: 7,560 ರೂ
- ಕೇರಳ: 7,700 ರೂ
- ಅಹ್ಮದಾಬಾದ್: 7,560 ರೂ
- ಜೈಪುರ್: 7,560 ರೂ
- ಲಕ್ನೋ: 7,560 ರೂ
- ಭುವನೇಶ್ವರ್: 7,700 ರೂ
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ