AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Rate Today Bangalore: ಚಿನ್ನದ ಬೆಲೆ ಬುಧವಾರವೂ ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

Bullion Market 2024 February 19th: ಚಿನ್ನದ ಬೆಲೆ ಇಂದು ಗ್ರಾಮ್​ಗೆ 65 ರೂನಷ್ಟು ಏರಿಕೆ ಆಗಿದೆ. ಅಪರಂಜಿ ಚಿನ್ನದ ಬೆಲೆ 70 ರೂ ಏರಿದೆ. 8,695 ರೂ ಇದ್ದ 24 ಕ್ಯಾರಟ್ ಚಿನ್ನದ ಬೆಲೆ 8,765 ರೂಗೆ ಏರಿದೆ. 22 ಕ್ಯಾರಟ್ ಚಿನ್ನದ ಬೆಲೆ 8,035 ರೂ ಮುಟ್ಟಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 100.50 ರೂ ಇದೆ. ಕಳೆದ 2-3 ವಾರಗಳಿಂದ ಬೆಳ್ಳಿ ಬೆಲೆಯಲ್ಲಿ ಗ್ರಾಮ್​ಗೆ ಒಂದು ರೂ ಮಾತ್ರವೇ ಹೆಚ್ಚಳವಾಗಿರುವುದು.

Gold Rate Today Bangalore: ಚಿನ್ನದ ಬೆಲೆ ಬುಧವಾರವೂ ಏರಿಕೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 19, 2025 | 10:04 AM

Share

ಬೆಂಗಳೂರು, ಫೆಬ್ರುವರಿ 19: ಚಿನ್ನದ ಬೆಲೆಯ ಸತತ ಏರಿಕೆ ಬುಧವಾರವೂ ಮುಂದುವರಿದಿದೆ. ಇಂದು ಗ್ರಾಮ್​ಗೆ 65ರೂನಿಂದ 70 ರೂವರೆಗೆ ಏರಿಕೆ ಆಗಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 8,000 ರೂ ಗಡಿ ದಾಟಿ ಹೋಗಿದೆ. ಅಪರಂಜಿ ಚಿನ್ನದ ಬೆಲೆಯೂ 8,700 ರೂ ಗಡಿ ದಾಟಿದೆ. ಹೊರ ದೇಶಗಳಲ್ಲೂ ಚಿನ್ನದ ಬೆಲೆಯ ಏರಿಕೆ ಆಗಿದೆ. ಬೆಳ್ಳಿ ಬೆಲೆ ಹೆಚ್ಚು ಸ್ಥಿರವಾಗಿದೆ. ಇವತ್ತು ಬುಧವಾರ ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 80,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 87,650 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,050 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 80,350 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,050 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 19ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,650 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,740 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,005 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,350 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 87,650 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,005 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 80,350 ರೂ
  • ಚೆನ್ನೈ: 80,350 ರೂ
  • ಮುಂಬೈ: 80,350 ರೂ
  • ದೆಹಲಿ: 80,500 ರೂ
  • ಕೋಲ್ಕತಾ: 80,350 ರೂ
  • ಕೇರಳ: 80,350 ರೂ
  • ಅಹ್ಮದಾಬಾದ್: 80,400 ರೂ
  • ಜೈಪುರ್: 80,500 ರೂ
  • ಲಕ್ನೋ: 80,500 ರೂ
  • ಭುವನೇಶ್ವರ್: 80,350 ರೂ

ಇದನ್ನೂ ಓದಿ: Unemployment: ಅಕ್ಟೋಬರ್-ಡಿಸೆಂಬರ್​ನಲ್ಲಿ ನಿರುದ್ಯೋಗ ದರ ಶೇ. 6.4ಕ್ಕೆ ಇಳಿಕೆ: ಎನ್​ಎಸ್​ಎಸ್​ಒ ಸಮೀಕ್ಷಾ ವರದಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,070 ರಿಂಗಿಟ್ (79,630 ರುಪಾಯಿ)
  • ದುಬೈ: 3,272.50 ಡಿರಾಮ್ (77,460 ರುಪಾಯಿ)
  • ಅಮೆರಿಕ: 880 ಡಾಲರ್ (76,500 ರುಪಾಯಿ)
  • ಸಿಂಗಾಪುರ: 1,213 ಸಿಂಗಾಪುರ್ ಡಾಲರ್ (78,580 ರುಪಾಯಿ)
  • ಕತಾರ್: 3,300 ಕತಾರಿ ರಿಯಾಲ್ (78,700 ರೂ)
  • ಸೌದಿ ಅರೇಬಿಯಾ: 3,340 ಸೌದಿ ರಿಯಾಲ್ (77,420 ರುಪಾಯಿ)
  • ಓಮನ್: 346.50 ಒಮಾನಿ ರಿಯಾಲ್ (78,240 ರುಪಾಯಿ)
  • ಕುವೇತ್: 268.70 ಕುವೇತಿ ದಿನಾರ್ (75,670 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,050 ರೂ
  • ಚೆನ್ನೈ: 10,800 ರೂ
  • ಮುಂಬೈ: 10,050 ರೂ
  • ದೆಹಲಿ: 10,050 ರೂ
  • ಕೋಲ್ಕತಾ: 10,050 ರೂ
  • ಕೇರಳ: 10,800 ರೂ
  • ಅಹ್ಮದಾಬಾದ್: 10,050 ರೂ
  • ಜೈಪುರ್: 10,050 ರೂ
  • ಲಕ್ನೋ: 10,050 ರೂ
  • ಭುವನೇಶ್ವರ್: 10,800 ರೂ
  • ಪುಣೆ: 10,050

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ