Gold Rate Today Bangalore: ಸತತವಾಗಿ ಏರುತ್ತಿರುವ ಚಿನ್ನದ ಬೆಲೆ; 8,800 ರೂ ದರ ದಾಟಿದ ಅಪರಂಜಿ ಚಿನ್ನ

Bullion Market 2024 February 20th: ಅಪರಂಜಿ ಚಿನ್ನದ ಬೆಲೆ 8,765 ರೂನಿಂದ 8,804 ರೂಗೆ ಏರಿದೆ. ಆಭರಣ ಚಿನ್ನದ ಬೆಲೆ 8,070 ರೂಗೆ ಏರಿದೆ. ಅಮೆರಿಕ, ಕುವೇತ್ ಸೇರಿದಂತೆ ಹೆಚ್ಚಿನ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲೂ ಚಿನ್ನದ ಬೆಲೆ ಏರಿಕೆ ಆಗಿದೆ. ಇದರ ನಡುವೆ ಬೆಳ್ಳಿ ಬೆಲೆಯ ಯಥಾಸ್ಥಿತಿ ಮುಂದುವರಿದಿದೆ. ಬೆಂಗಳೂರಿನಲ್ಲಿ ಇದರ ಬೆಲೆ ಗ್ರಾಮ್​ಗೆ 100.50 ರೂ ಇದೆ.

Gold Rate Today Bangalore: ಸತತವಾಗಿ ಏರುತ್ತಿರುವ ಚಿನ್ನದ ಬೆಲೆ; 8,800 ರೂ ದರ ದಾಟಿದ ಅಪರಂಜಿ ಚಿನ್ನ
ಚಿನ್ನ

Updated on: Feb 20, 2025 | 10:21 AM

ಬೆಂಗಳೂರು, ಫೆಬ್ರುವರಿ 20: ಇಂದು ಗುರುವಾರವೂ ಚಿನ್ನದ ಬೆಲೆಯ ನಾಗಾಲೋಟ ಮುಂದುವರಿದಿದೆ. ಗುರುವಾರ ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 35 ರೂನಷ್ಟು ಹೆಚ್ಚಾಗಿದೆ. ಅಪರಂಜಿ ಚಿನ್ನದ ಬೆಲೆಯಲ್ಲಿ 39 ರೂ ಏರಿಕೆ ಆಗಿದೆ. ಸೋಮವಾರದಿಂದ ಸತತ ನಾಲ್ಕನೇ ದಿನ ಈ ಸ್ವರ್ಣ ದುಬಾರಿಯಾಗಿದೆ. ಅಪರಂಜಿ ಚಿನ್ನದ ಬೆಲೆ ಭಾರತದಲ್ಲಿ 8,800 ರೂ ಮೈಲಿಗಲ್ಲು ಮುಟ್ಟಿ ಹೊಸ ದಾಖಲೆ ಬರೆದಿದೆ. 18 ಕ್ಯಾರಟ್ ಚಿನ್ನದ ಬೆಲೆಯೂ 6,600 ರೂ ಗಡಿ ಮುಟ್ಟಿ ದಾಖಲೆ ಮಾಡಿದೆ. ಇತ್ತ ಚಿನ್ನದ ಬೆಲೆ ಏರಿಕೆ ಆಗುತ್ತಿದ್ದರೂ ಬೆಳ್ಳಿ ಸ್ತಬ್ಧತೆ ಮುಂದುವರಿದಿದೆ. ಇಂದೂ ಕೂಡ ಬೆಳ್ಳಿ ಬೆಲೆಯ ವ್ಯತ್ಯಯವಾಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 80,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 88,040 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,050 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 80,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,050 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 20ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 88,040 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,030 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,005 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 88,040 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,005 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 80,700 ರೂ
  • ಚೆನ್ನೈ: 80,700 ರೂ
  • ಮುಂಬೈ: 80,700 ರೂ
  • ದೆಹಲಿ: 80,850 ರೂ
  • ಕೋಲ್ಕತಾ: 80,700 ರೂ
  • ಕೇರಳ: 80,700 ರೂ
  • ಅಹ್ಮದಾಬಾದ್: 80,750 ರೂ
  • ಜೈಪುರ್: 80,850 ರೂ
  • ಲಕ್ನೋ: 80,850 ರೂ
  • ಭುವನೇಶ್ವರ್: 80,700 ರೂ

ಇದನ್ನೂ ಓದಿ: ಮಹಾಕುಂಭಕ್ಕೆ ನಿರೀಕ್ಷೆಮೀರಿದ ಜನಸಾಗರ; ವ್ಯಾಪಾರ ವಹಿವಾಟು ಮೂರು ಲಕ್ಷ ಕೋಟಿ ರೂ ಮುಟ್ಟುವ ನಿರೀಕ್ಷೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,120 ರಿಂಗಿಟ್ (80,740 ರುಪಾಯಿ)
  • ದುಬೈ: 3,292.50 ಡಿರಾಮ್ (77,840 ರುಪಾಯಿ)
  • ಅಮೆರಿಕ: 890 ಡಾಲರ್ (77,280 ರುಪಾಯಿ)
  • ಸಿಂಗಾಪುರ: 1,233 ಸಿಂಗಾಪುರ್ ಡಾಲರ್ (79,890 ರುಪಾಯಿ)
  • ಕತಾರ್: 3,310 ಕತಾರಿ ರಿಯಾಲ್ (78,840 ರೂ)
  • ಸೌದಿ ಅರೇಬಿಯಾ: 3,350 ಸೌದಿ ರಿಯಾಲ್ (77,560 ರುಪಾಯಿ)
  • ಓಮನ್: 348.50 ಒಮಾನಿ ರಿಯಾಲ್ (78,590 ರುಪಾಯಿ)
  • ಕುವೇತ್: 270.70 ಕುವೇತಿ ದಿನಾರ್ (76,170 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,050 ರೂ
  • ಚೆನ್ನೈ: 10,800 ರೂ
  • ಮುಂಬೈ: 10,050 ರೂ
  • ದೆಹಲಿ: 10,050 ರೂ
  • ಕೋಲ್ಕತಾ: 10,050 ರೂ
  • ಕೇರಳ: 10,800 ರೂ
  • ಅಹ್ಮದಾಬಾದ್: 10,050 ರೂ
  • ಜೈಪುರ್: 10,050 ರೂ
  • ಲಕ್ನೋ: 10,050 ರೂ
  • ಭುವನೇಶ್ವರ್: 10,800 ರೂ
  • ಪುಣೆ: 10,050

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸುಗ್ಗನಹಳ್ಳಿ ವಿಜಯಸಾರಥಿ

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Loading...
Unable to load recommendations.
Follow Us