Gold Silver Price on 22nd February: ಭಾರತ ಹಾಗೂ ವಿದೇಶಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024: ಚಿನ್ನದ ಬೆಲೆ ಇಂದು ಗ್ರಾಮ್​ಗೆ 25 ರೂನಷ್ಟು ಏರಿದರೆ, ಬೆಳ್ಳಿ ಕೂಡ ತುಸು ಬೆಲೆ ಹೆಚ್ಚಳ ಕಂಡಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,740 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.70 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,600 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,250 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 22nd February: ಭಾರತ ಹಾಗೂ ವಿದೇಶಗಳಲ್ಲಿ ಚಿನ್ನ, ಬೆಳ್ಳಿ ಬೆಲೆ ಏರಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Edited By:

Updated on: Feb 22, 2024 | 5:17 AM

ಬೆಂಗಳೂರು, ಫೆಬ್ರುವರಿ 22: ಭಾರತದಲ್ಲಿ ಚಿನ್ನದ ಏರಿಳಿತದ ಆಟ ನಡೆಯುತ್ತಿದೆ. ಇಂದು ಚಿನ್ನ ಮತ್ತು ಬೆಳ್ಳಿ (Gold and silver Rates) ಎರಡೂ ಬೆಲೆ ಹೆಚ್ಚಾಗಿದೆ. ವಿದೇಶಗಳ ಮಾರುಕಟ್ಟೆಯಲ್ಲಿ ಕಳೆದ ಎರಡು ವಾರಗಳಿಂದ ಇಳಿಕೆಯಾಗಿದ್ದು ಒಂದೆರಡು ಬಾರಿ ಮಾತ್ರ. ಭಾರತದಲ್ಲಿ ಇವತ್ತು ಗುರುವಾರ ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ 25 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆ ಗ್ರಾಮ್​ಗೆ 20 ಪೈಸೆಯಷ್ಟು ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,740 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,570 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,250 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 22ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,740 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 757 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,740 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 725 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,600 ರೂ
  • ಚೆನ್ನೈ: 58,100 ರೂ
  • ಮುಂಬೈ: 57,600 ರೂ
  • ದೆಹಲಿ: 57,750 ರೂ
  • ಕೋಲ್ಕತಾ: 57,600 ರೂ
  • ಕೇರಳ: 57,600 ರೂ
  • ಅಹ್ಮದಾಬಾದ್: 57,650 ರೂ
  • ಜೈಪುರ್: 57,750 ರೂ
  • ಲಕ್ನೋ: 57,750 ರೂ
  • ಭುವನೇಶ್ವರ್: 57,600 ರೂ

ಇದನ್ನೂ ಓದಿ: ಈರುಳ್ಳಿ ಬೆಲೆ ಈಗ ಕುಸಿತ; ಆದರೆ ಮಾರ್ಚ್​ನಲ್ಲಿ ಕಣ್ಣೀರು ಬರಿಸಲಿದೆಯಂತೆ ಬೆಲೆ ಏರಿಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,100 ರಿಂಗಿಟ್ (53,610 ರುಪಾಯಿ)
  • ದುಬೈ: 2,272.50 ಡಿರಾಮ್ (51,306 ರುಪಾಯಿ)
  • ಅಮೆರಿಕ: 620 ಡಾಲರ್ (51,413 ರುಪಾಯಿ)
  • ಸಿಂಗಾಪುರ: 847 ಸಿಂಗಾಪುರ್ ಡಾಲರ್ (52,270 ರುಪಾಯಿ)
  • ಕತಾರ್: 2,340 ಕತಾರಿ ರಿಯಾಲ್ (53,206 ರೂ)
  • ಸೌದಿ ಅರೇಬಿಯಾ: 2,340 ಸೌದಿ ರಿಯಾಲ್ (51,738 ರುಪಾಯಿ)
  • ಓಮನ್: 247.50 ಒಮಾನಿ ರಿಯಾಲ್ (53,243 ರುಪಾಯಿ)
  • ಕುವೇತ್: 195 ಕುವೇತಿ ದಿನಾರ್ (52,557 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,250 ರೂ
  • ಚೆನ್ನೈ: 7,720 ರೂ
  • ಮುಂಬೈ: 7,570 ರೂ
  • ದೆಹಲಿ: 7,570 ರೂ
  • ಕೋಲ್ಕತಾ: 7,570 ರೂ
  • ಕೇರಳ: 7,720 ರೂ
  • ಅಹ್ಮದಾಬಾದ್: 7,570 ರೂ
  • ಜೈಪುರ್: 7,570 ರೂ
  • ಲಕ್ನೋ: 7,570 ರೂ
  • ಭುವನೇಶ್ವರ್: 7,720 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Web contact

TV9 Kannada

Read More
Follow Us