Gold Rate Today Bangalore: 10 ಗ್ರಾಮ್ ಚಿನ್ನದ ಬೆಲೆ 200 ರೂ ಹೆಚ್ಚಳ

Bullion Market 2024 February 25th: ಇವತ್ತು ಮಂಗಳವಾರ ಚಿನ್ನದ ಬೆಲೆಯಲ್ಲಿ ಏರಿಕೆ ಮುಂದುವರಿದರೆ, ಬೆಳ್ಳಿ ಬೆಲೆಯ ಯಥಾಸ್ಥಿತಿ ಮುಂದುವರಿದಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ ಗ್ರಾಮ್​ಗೆ 20 ರೂ ಏರಿದೆ, ಅಪರಂಜಿ ಚಿನ್ನದ ಬೆಲೆ 22 ರೂ ಏರಿದೆ. ಬೆಳ್ಳಿ ಬೆಲೆ ಬೆಂಗಳೂರಿನಲ್ಲಿ ಗ್ರಾಮ್​​ಗೆ 101 ರೂ ಇದ್ದರೆ, ಚೆನ್ನೈ ಮೊದಲಾದ ಕಡೆ 108 ರೂ ಇದೆ.

Gold Rate Today Bangalore: 10 ಗ್ರಾಮ್ ಚಿನ್ನದ ಬೆಲೆ 200 ರೂ ಹೆಚ್ಚಳ
ಚಿನ್ನ

Updated on: Feb 25, 2025 | 10:41 AM

ಬೆಂಗಳೂರು, ಫೆಬ್ರುವರಿ 25: ಚಿನ್ನದ ಬೆಲೆಯ ಸತತ ಹೆಚ್ಚಳ ಮುಂದುವರಿಯುತ್ತಿದೆ. ನಿನ್ನೆ ಗ್ರಾಮ್​ಗೆ 10 ರೂ ಏರಿಕೆ ಆಗಿದ್ದ ಚಿನ್ನದ ಬೆಲೆ ಇವತ್ತು 20 ರೂ ಹೆಚ್ಚಳವಾಗಿದೆ. ಅಪರಂಜಿ ಚಿನ್ನದ ಬೆಲೆಯಲ್ಲಿ 22 ರೂ ಏರಿಕೆಯಾಗಿದೆ. ಆಭರಣ ಚಿನ್ನದ ಬೆಲೆ 8,055 ರೂನಿಂದ 8,075 ರೂಗೆ ಏರಿದೆ. ಅಪರಂಜಿ ಚಿನ್ನದ ಬೆಲೆ 8,800 ರೂ ಗಡಿ ದಾಟಿದೆ. 18 ಕ್ಯಾರಟ್ ಚಿನ್ನದ ಬೆಲೆ 6,600 ರೂ ಗಡಿ ಮುಟ್ಟಿದೆ. ವಿದೇಶಗಳಲ್ಲಿ ಕೆಲವೆಡೆ ಚಿನ್ನದ ಬೆಲೆಯಲ್ಲಿ ವ್ಯತ್ಯಯವಾಗಿದೆ. ಇನ್ನು, ಬೆಳ್ಳಿ ಬೆಲೆಯ ಸ್ಥಿರತೆ ಮುಂದುವರಿದಿದೆ. ಇಂದು ಬೆಳ್ಳಿ ಬೆಲೆಯಲ್ಲಿ ಯಾವ ಬದಲಾವಣೆ ಆಗಿಲ್ಲ. ಬೆಂಗಳೂರಿನಲ್ಲಿ ಅದರ ಬೆಲೆ ಗ್ರಾಮ್​ಗೆ 101 ರೂನಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 80,550 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 87,870 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 10,100 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 80,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 10,100 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 25ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 88,090 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 66,070 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 80,750 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 88,090 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 1,010 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 80,750 ರೂ
  • ಚೆನ್ನೈ: 80,750 ರೂ
  • ಮುಂಬೈ: 80,750 ರೂ
  • ದೆಹಲಿ: 80,900 ರೂ
  • ಕೋಲ್ಕತಾ: 80,750 ರೂ
  • ಕೇರಳ: 80,750 ರೂ
  • ಅಹ್ಮದಾಬಾದ್: 80,800 ರೂ
  • ಜೈಪುರ್: 80,900 ರೂ
  • ಲಕ್ನೋ: 80,900 ರೂ
  • ಭುವನೇಶ್ವರ್: 80,750 ರೂ

ಇದನ್ನೂ ಓದಿ: ನಷ್ಟದಲ್ಲಿರುವ ಸಂಸ್ಥೆಗಳ ಸಹಯೋಗ; ಟಾಟಾ ಪ್ಲೇ, ಏರ್ಟೆಲ್ ಡಿಟಿಎಚ್ ವಿಲೀನ ಒಪ್ಪಂದ ಅಂತಿಮ ಹಂತದಲ್ಲಿ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,100 ರಿಂಗಿಟ್ (80,700 ರುಪಾಯಿ)
  • ದುಬೈ: 3,312.50 ಡಿರಾಮ್ (78,360 ರುಪಾಯಿ)
  • ಅಮೆರಿಕ: 895 ಡಾಲರ್ (77,760 ರುಪಾಯಿ)
  • ಸಿಂಗಾಪುರ: 1,232 ಸಿಂಗಾಪುರ್ ಡಾಲರ್ (79,970 ರುಪಾಯಿ)
  • ಕತಾರ್: 3,315 ಕತಾರಿ ರಿಯಾಲ್ (79,000 ರೂ)
  • ಸೌದಿ ಅರೇಬಿಯಾ: 3,350 ಸೌದಿ ರಿಯಾಲ್ (77,600 ರುಪಾಯಿ)
  • ಓಮನ್: 350.50 ಒಮಾನಿ ರಿಯಾಲ್ (79,090 ರುಪಾಯಿ)
  • ಕುವೇತ್: 270.30 ಕುವೇತಿ ದಿನಾರ್ (76,130 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 10,100 ರೂ
  • ಚೆನ್ನೈ: 10,800 ರೂ
  • ಮುಂಬೈ: 10,100 ರೂ
  • ದೆಹಲಿ: 10,100 ರೂ
  • ಕೋಲ್ಕತಾ: 10,100 ರೂ
  • ಕೇರಳ: 10,800 ರೂ
  • ಅಹ್ಮದಾಬಾದ್: 10,100 ರೂ
  • ಜೈಪುರ್: 10,100 ರೂ
  • ಲಕ್ನೋ: 10,100 ರೂ
  • ಭುವನೇಶ್ವರ್: 10,800 ರೂ
  • ಪುಣೆ: 10,100

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us