AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 27th February: ಚಿನ್ನ, ಬೆಳ್ಳಿ ಬೆಲೆ ಇವತ್ತು ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024: ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ ಇವತ್ತು ಕಡಿಮೆ ಆಗಿದೆ. ಚಿನ್ನ ಗ್ರಾಮ್​ಗೆ 10 ರೂ ಬೆಲೆ ಇಳಿಕೆ ಕಂಡಿದೆ. ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,840 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 74.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,600 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,200 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 27th February: ಚಿನ್ನ, ಬೆಳ್ಳಿ ಬೆಲೆ ಇವತ್ತು ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Feb 27, 2024 | 4:56 AM

Share

ಬೆಂಗಳೂರು, ಫೆಬ್ರುವರಿ 27: ನಿನ್ನೆ ಸೋಮವಾರ ಭಾರತದಲ್ಲಿ ಏರಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇಂದು ಇಳಿದಿದೆ. ಚಿನ್ನದ ಬೆಲೆ ಗ್ರಾಮ್​ಗೆ 10 ರೂನಷ್ಟು ಕಡಿಮೆ ಆಗಿದೆ. ನಿನ್ನೆ 20 ರೂನಷ್ಟು ಏರಿಕೆ ಆಗಿತ್ತು. ಬೆಳ್ಳಿ ಬೆಲೆ ಕೆಲವೆಡೆ ಗ್ರಾಮ್​ಗೆ 50 ಪೈಸೆ ತಗ್ಗಿದೆ. ಬೆಂಗಳೂರಿನಲ್ಲಿ ಗ್ರಾಂಗೆ 50 ಪೈಸೆ ಹೆಚ್ಚಾಗಿದೆ. ಆದರೆ, ಇತರ ನಗರಗಳಿಂದ ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಕಡಿಮೆಯೇ ಇದೆ. ಇನ್ನು ವಿದೇಶಗಳಲ್ಲಿ ಚಿನ್ನದ ಬೆಲೆ ಬಹುತೇಕ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,200 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 27ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,840 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 745 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,840 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 720 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,600 ರೂ
  • ಚೆನ್ನೈ: 58,100 ರೂ
  • ಮುಂಬೈ: 57,600 ರೂ
  • ದೆಹಲಿ: 57,750 ರೂ
  • ಕೋಲ್ಕತಾ: 57,600 ರೂ
  • ಕೇರಳ: 57,600 ರೂ
  • ಅಹ್ಮದಾಬಾದ್: 57,650 ರೂ
  • ಜೈಪುರ್: 57,750 ರೂ
  • ಲಕ್ನೋ: 57,750 ರೂ
  • ಭುವನೇಶ್ವರ್: 57,600 ರೂ

ಇದನ್ನೂ ಓದಿ: ಮಾರುತಿ ಈ ದೇಶದ ನಂ. 1 ಕಾರ್ ಕಂಪನಿ ಆಗಿರುವ ಸೀಕ್ರೆಟ್ ಏನು? ಅಧ್ಯಕ್ಷ ಭಾರ್ಗವ ಬಿಚ್ಚಿಟ್ಟ ರಹಸ್ಯ ಇದು

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,110 ರಿಂಗಿಟ್ (53,955 ರುಪಾಯಿ)
  • ದುಬೈ: 2,280 ಡಿರಾಮ್ (51,447 ರುಪಾಯಿ)
  • ಅಮೆರಿಕ: 625 ಡಾಲರ್ (51,798 ರುಪಾಯಿ)
  • ಸಿಂಗಾಪುರ: 850 ಸಿಂಗಾಪುರ್ ಡಾಲರ್ (52,427 ರುಪಾಯಿ)
  • ಕತಾರ್: 2,340 ಕತಾರಿ ರಿಯಾಲ್ (53,182 ರೂ)
  • ಸೌದಿ ಅರೇಬಿಯಾ: 2,350 ಸೌದಿ ರಿಯಾಲ್ (51,928 ರುಪಾಯಿ)
  • ಓಮನ್: 248 ಒಮಾನಿ ರಿಯಾಲ್ (53,386 ರುಪಾಯಿ)
  • ಕುವೇತ್: 195 ಕುವೇತಿ ದಿನಾರ್ (52,519 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,200 ರೂ
  • ಚೆನ್ನೈ: 7,640 ರೂ
  • ಮುಂಬೈ: 7,450 ರೂ
  • ದೆಹಲಿ: 7,450 ರೂ
  • ಕೋಲ್ಕತಾ: 7,450 ರೂ
  • ಕೇರಳ: 7,640 ರೂ
  • ಅಹ್ಮದಾಬಾದ್: 7,450 ರೂ
  • ಜೈಪುರ್: 7,450 ರೂ
  • ಲಕ್ನೋ: 7,450 ರೂ
  • ಭುವನೇಶ್ವರ್: 7,640 ರೂ

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ