Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 February 28th: ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಇಂದು ಶುಕ್ರವಾರ ಇಳಿಕೆ ಆಗಿವೆ. ಚಿನ್ನದ ಬೆಲೆ ಸತತ ಮೂರನೇ ಬಾರಿ ಕಡಿಮೆಗೊಂಡಿದೆ. ಆಭರಣ ಚಿನ್ನದ ಬೆಲೆ 8,000 ರೂ ಒಳಗೆ ಬಂದಿದೆ. ಅಪರಂಜಿ ಚಿನ್ನದ ಬೆಲೆ 8,700 ರೂ ಗಡಿಗಿಂತ ಕಡಿಮೆಗೆ ಇಳಿದಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 97 ರೂಗೆ ಇಳಿದಿದೆ. ಚೆನ್ನೈ ಮೊದಲಾದೆಡೆ 106 ರೂಗೆ ಇಳಿದಿದೆ.

Gold Rate Today Bangalore: ಚಿನ್ನ, ಬೆಳ್ಳಿ ಬೆಲೆಗಳೆರಡೂ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ

Updated on: Feb 28, 2025 | 10:27 AM

ಬೆಂಗಳೂರು, ಫೆಬ್ರುವರಿ 28: ಚಿನ್ನದ ಬೆಲೆಗಳ ಸತತ ಇಳಿಕೆ ಮುಂದುವರಿದಿದೆ. ಈ ವಾರ ಸತತ ಮೂರನೇ ಬಾರಿ ಚಿನ್ನದ ಬೆಲೆ ಇಳಿದಿದೆ. ಬೆಳ್ಳಿ ಬೆಲೆಯೂ ಇಳಿಕೆ ಕಂಡಿದೆ. ಇಂದು ಶುಕ್ರವಾರ ಚಿನ್ನದ ಬೆಲೆ ಗ್ರಾಮ್​ಗೆ 50 ರೂ ಕಡಿಮೆಗೊಂಡಿದೆ. ಅಪರಂಜಿ ಚಿನ್ನದ ಬೆಲೆ 55 ರೂ ಕಡಿಮೆ ಆಗಿದೆ. ವಿದೇಶಗಳಲ್ಲಿ ಹಲವೆಡೆ ಬೆಲೆ ಏರಿಳಿತಗಳಾಗಿವೆ. ಬೆಳ್ಳಿ ಬೆಲೆ ಈ ವಾರದಲ್ಲಿ ಎರಡನೇ ಬಾರಿ ಇಳಿಕೆಯಾಗಿದೆ. ಇಂದು ಒಂದು ಗ್ರಾಮ್ ಬೆಳ್ಳಿ ಬೆಲೆ ಒಂದು ರೂನಷ್ಟು ಕಡಿಮೆ ಆಗಿದೆ. ಬೆಂಗಳೂರಿನಲ್ಲಿ 98 ರೂ ಇದ್ದ ಅದರ ಬೆಲೆ 97 ರೂಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 79,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 86,840 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 79,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,700 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 28ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 86,840 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 65,130 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,600 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 86,840 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 970 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 79,600 ರೂ
  • ಚೆನ್ನೈ: 79,600 ರೂ
  • ಮುಂಬೈ: 79,600 ರೂ
  • ದೆಹಲಿ: 79,750 ರೂ
  • ಕೋಲ್ಕತಾ: 79,600 ರೂ
  • ಕೇರಳ: 79,600 ರೂ
  • ಅಹ್ಮದಾಬಾದ್: 79,650 ರೂ
  • ಜೈಪುರ್: 79,750 ರೂ
  • ಲಕ್ನೋ: 79,750 ರೂ
  • ಭುವನೇಶ್ವರ್: 79,600 ರೂ

ಇದನ್ನೂ ಓದಿ: ಭಾರತದಲ್ಲಿ ಜನವರಿಯಲ್ಲಿ ಶೇ. 5ರಷ್ಟು ಹೆಚ್ಚಿದ ಚಿಲ್ಲರೆ ಮಾರಾಟ; ಆಹಾರ, ದಿನಸಿ ವಸ್ತುಗಳ ಸೇಲ್ಸ್ ಗರಿಷ್ಠ ಹೆಚ್ಚಳ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 4,070 ರಿಂಗಿಟ್ (79,630 ರುಪಾಯಿ)
  • ದುಬೈ: 3,237.50 ಡಿರಾಮ್ (77,010 ರುಪಾಯಿ)
  • ಅಮೆರಿಕ: 875 ಡಾಲರ್ (76,440 ರುಪಾಯಿ)
  • ಸಿಂಗಾಪುರ: 1,210 ಸಿಂಗಾಪುರ್ ಡಾಲರ್ (78,350 ರುಪಾಯಿ)
  • ಕತಾರ್: 3,250 ಕತಾರಿ ರಿಯಾಲ್ (77,900 ರೂ)
  • ಸೌದಿ ಅರೇಬಿಯಾ: 3,280 ಸೌದಿ ರಿಯಾಲ್ (76,400 ರುಪಾಯಿ)
  • ಓಮನ್: 343 ಒಮಾನಿ ರಿಯಾಲ್ (77,830 ರುಪಾಯಿ)
  • ಕುವೇತ್: 264.80 ಕುವೇತಿ ದಿನಾರ್ (74,940 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,700 ರೂ
  • ಚೆನ್ನೈ: 10,500 ರೂ
  • ಮುಂಬೈ: 9,700 ರೂ
  • ದೆಹಲಿ: 9,700 ರೂ
  • ಕೋಲ್ಕತಾ: 9,700 ರೂ
  • ಕೇರಳ: 10,500 ರೂ
  • ಅಹ್ಮದಾಬಾದ್: 9,700 ರೂ
  • ಜೈಪುರ್: 9,700 ರೂ
  • ಲಕ್ನೋ: 9,700 ರೂ
  • ಭುವನೇಶ್ವರ್: 10,500 ರೂ
  • ಪುಣೆ: 9,700

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
Follow Us