AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 4th February: ಚಿನ್ನ, ಬೆಳ್ಳಿ ಬೆಲೆ ಎರಡೂ ಹೆಚ್ಚಳ; ನೋಡಿ ಇವತ್ತಿನ ದರಪಟ್ಟಿ

Bullion Market 2024, February 4th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,600 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 58,300 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 4th February: ಚಿನ್ನ, ಬೆಳ್ಳಿ ಬೆಲೆ ಎರಡೂ ಹೆಚ್ಚಳ; ನೋಡಿ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Feb 04, 2024 | 5:00 AM

Share

ಬೆಂಗಳೂರು, ಫೆಬ್ರುವರಿ 4: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಎರಡೂ ಇವತ್ತು ಏರಿಕೆ ಆಗಿವೆ. ಚಿನ್ನದ ಬೆಲೆ ಭಾರತದಲ್ಲಿ ಗ್ರಾಮ್​ಗೆ 15 ರೂನಷ್ಟು ಏರಿದರೆ ಬೆಳ್ಳಿ ಬೆಲೆ ಗ್ರಾಂಗೆ 20 ಪೈಸೆ ಹೆಚ್ಚಳಗೊಂಡಿದೆ. ಕಳೆದ 10 ದಿನದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 55 ರೂನಷ್ಟು ಹೆಚ್ಚಾಗಿದೆ. ಬಹುತೇಕ ದೇಶಗಳಲ್ಲಿ ಚಿನ್ನದ ಬೆಲೆ ಏರಿದೆ. ಕಳೆದ 10 ದಿನದಲ್ಲಿ ಬೆಳ್ಳಿ ಬೆಲೆ 1 ಗ್ರಾಮ್​ಗೆ ಒಂದು ರುಪಾಯಿ ಇಪ್ಪತ್ತು ಪೈಸೆಯಷ್ಟು ಏರಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,600 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,650 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 4ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,600 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,600 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,300 ರೂ
  • ಚೆನ್ನೈ: 58,900 ರೂ
  • ಮುಂಬೈ: 58,300 ರೂ
  • ದೆಹಲಿ: 58,450 ರೂ
  • ಕೋಲ್ಕತಾ: 58,300 ರೂ
  • ಕೇರಳ: 58,300 ರೂ
  • ಅಹ್ಮದಾಬಾದ್: 58,350 ರೂ
  • ಜೈಪುರ್: 58,450 ರೂ
  • ಲಕ್ನೋ: 58,450 ರೂ
  • ಭುವನೇಶ್ವರ್: 58,300 ರೂ

ಇದನ್ನೂ ಓದಿ: ಬಜೆಟ್​ನಲ್ಲಿ ಕಂಡುಬಂದ 1111111 ಎಂಬ ಮ್ಯಾಜಿಕ್ ನಂಬರ್; ಇದರದ್ದು ಧನಾತ್ಮಕ ಪರಿಣಾಮ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,100 ರಿಂಗಿಟ್ (54,474 ರುಪಾಯಿ)
  • ದುಬೈ: 2,305 ಡಿರಾಮ್ (52,029 ರುಪಾಯಿ)
  • ಅಮೆರಿಕ: 630 ಡಾಲರ್ (52,232 ರುಪಾಯಿ)
  • ಸಿಂಗಾಪುರ: 853 ಸಿಂಗಾಪುರ್ ಡಾಲರ್ (52,955 ರುಪಾಯಿ)
  • ಕತಾರ್: 2,365 ಕತಾರಿ ರಿಯಾಲ್ (53,778 ರೂ)
  • ಸೌದಿ ಅರೇಬಿಯಾ: 2,350 ಸೌದಿ ರಿಯಾಲ್ (51,953 ರುಪಾಯಿ)
  • ಓಮನ್: 250.50 ಒಮಾನಿ ರಿಯಾಲ್ (53,962 ರುಪಾಯಿ)
  • ಕುವೇತ್: 197.50 ಕುವೇತಿ ದಿನಾರ್ (53,281 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,350 ರೂ
  • ಚೆನ್ನೈ: 7,800 ರೂ
  • ಮುಂಬೈ: 7,650 ರೂ
  • ದೆಹಲಿ: 7,650 ರೂ
  • ಕೋಲ್ಕತಾ: 7,650 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,650 ರೂ
  • ಜೈಪುರ್: 7,650 ರೂ
  • ಲಕ್ನೋ: 7,650 ರೂ
  • ಭುವನೇಶ್ವರ್: 7,800 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್