AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 6th February: ಚಿನ್ನ, ಬೆಳ್ಳಿ ಬೆಲೆ ಇಂದೂ ಇಳಿಕೆ; ಚಿನ್ನದ ಬೆಲೆ ಗ್ರಾಮ್​ಗೆ 15 ರೂನಷ್ಟು ಕಡಿಮೆ

Bullion Market 2024, February 6th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,220 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.20 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,950 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,520 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 6th February: ಚಿನ್ನ, ಬೆಳ್ಳಿ ಬೆಲೆ ಇಂದೂ ಇಳಿಕೆ; ಚಿನ್ನದ ಬೆಲೆ ಗ್ರಾಮ್​ಗೆ 15 ರೂನಷ್ಟು ಕಡಿಮೆ
ಚಿನ್ನ
TV9 Web
| Edited By: |

Updated on: Feb 06, 2024 | 5:00 AM

Share

ಬೆಂಗಳೂರು, ಫೆಬ್ರುವರಿ 6: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಸತತವಾಗಿ ಇಳಿದಿದೆ. ವಿದೇಶಗಳಲ್ಲಿ ಕೆಲವೆಡೆ ಇಳಿದರೆ, ಇನ್ನೂ ಕೆಲವೆಡೆ ಬೆಲೆ ಏರಿಕೆ ಆಗಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 15 ರುನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ 30 ಪೈಸೆ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,950 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,220 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,520 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,950 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,520 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಫೆಬ್ರುವರಿ 6ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,220 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 725 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,950 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,220 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 752 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,950 ರೂ
  • ಚೆನ್ನೈ: 58,500 ರೂ
  • ಮುಂಬೈ: 57,950 ರೂ
  • ದೆಹಲಿ: 58,100 ರೂ
  • ಕೋಲ್ಕತಾ: 57,950 ರೂ
  • ಕೇರಳ: 57,950 ರೂ
  • ಅಹ್ಮದಾಬಾದ್: 58,000 ರೂ
  • ಜೈಪುರ್: 58,100 ರೂ
  • ಲಕ್ನೋ: 58,100 ರೂ
  • ಭುವನೇಶ್ವರ್: 57,950 ರೂ

ಇದನ್ನೂ ಓದಿ: ಪ್ಯಾನ್-ಆಧಾರ್ ಲಿಂಕ್ ವಿಳಂಬ: ಸರ್ಕಾರ ಸಂಗ್ರಹಿಸಿದ ದಂಡದ ಮೊತ್ತ 600 ಕೋಟಿ ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,100 ರಿಂಗಿಟ್ (54,170 ರುಪಾಯಿ)
  • ದುಬೈ: 2,267.50 ಡಿರಾಮ್ (51,265 ರುಪಾಯಿ)
  • ಅಮೆರಿಕ: 625 ಡಾಲರ್ (51,898 ರುಪಾಯಿ)
  • ಸಿಂಗಾಪುರ: 851 ಸಿಂಗಾಪುರ್ ಡಾಲರ್ (52,493 ರುಪಾಯಿ)
  • ಕತಾರ್: 2,340 ಕತಾರಿ ರಿಯಾಲ್ (53,294 ರೂ)
  • ಸೌದಿ ಅರೇಬಿಯಾ: 2,350 ಸೌದಿ ರಿಯಾಲ್ (52,033 ರುಪಾಯಿ)
  • ಓಮನ್: 247.50 ಒಮಾನಿ ರಿಯಾಲ್ (53,381 ರುಪಾಯಿ)
  • ಕುವೇತ್: 195 ಕುವೇತಿ ದಿನಾರ್ (52,602 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,250 ರೂ
  • ಚೆನ್ನೈ: 7,670 ರೂ
  • ಮುಂಬೈ: 7,520 ರೂ
  • ದೆಹಲಿ: 7,520 ರೂ
  • ಕೋಲ್ಕತಾ: 7,520 ರೂ
  • ಕೇರಳ: 7,670 ರೂ
  • ಅಹ್ಮದಾಬಾದ್: 7,520 ರೂ
  • ಜೈಪುರ್: 7,520 ರೂ
  • ಲಕ್ನೋ: 7,520 ರೂ
  • ಭುವನೇಶ್ವರ್: 7,670 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು