ಬೆಂಗಳೂರು, ಫೆಬ್ರುವರಿ 8: ಈ ವಾರ ಸತತವಾಗಿ ಇಳಿಯುತ್ತಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇಂದು ಮತ್ತೆ ಏರಿಕೆ ಕಂಡಿದೆ. ಚಿನ್ನದ ಬೆಲೆ ಗ್ರಾಮ್ಗೆ 25 ರೂನಷ್ಟು ಹೆಚ್ಚಳಗೊಂಡಿದೆ. ಬೆಳ್ಳಿ ಬೆಲೆ ಬೆಂಗಳೂರು ಮೊದಲಾದ ಕೆಲವೇ ನಗರಗಳಲ್ಲಿ ಮಾತ್ರ ತುಸು ಇಳಿಕೆಯಾಗಿದೆ. ಉಳಿದಂತೆ ಯಥಾಸ್ಥಿತಿಯಲ್ಲಿದೆ. ಚಿನ್ನದ ಬೆಲೆ ಭಾರತದಲ್ಲಿ ಎಲ್ಲೆಡೆ ಏರಿದರೆ, ಕೆಲ ದೇಶಗಳಲ್ಲಿ ಕಡಿಮೆಯೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 58,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,230 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,450 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 58,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,200 ರುಪಾಯಿಯಲ್ಲಿ ಇದೆ.
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 58,000 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 63,230 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 725 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: 2023-24 ಆರ್ಥಿಕ ವರ್ಷದಲ್ಲಿ 2 ಲಕ್ಷಕ್ಕೂ ಹೆಚ್ಚು ಮಂದಿ 1 ಕೋಟಿ ರೂಪಾಯಿಗೂ ಹೆಚ್ಚು ಹಣ ಗಳಿಸಿದ್ದಾರಂತೆ!
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ