Gold Silver Price on 14th January: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024 January 14th: ಚಿನ್ನದ ಬೆಲೆ ಗ್ರಾಮ್​ಗೆ 10 ರೂ ಕಡಿಮೆ ಆಗಿದೆ. 7,340 ರೂ ಇದ್ದ 22 ಕ್ಯಾರಟ್ ಚಿನ್ನದ ಬೆಲೆ ಸಂಕ್ರಾಂತಿ ಹಬ್ಬದಂದು 7,330 ರೂ ಆಗಿದೆ. 18 ಕ್ಯಾರಟ್ ಆಭರಣ ಚಿನ್ನದ ಬೆಲೆ 5,997 ರೂ ಆಗಿದೆ. ಅಪರಂಜಿ ಚಿನ್ನದ ಬೆಲೆ 7,996 ರೂ ಆಗಿದೆ. ಬೆಳ್ಳಿ ಬೆಲೆ ಬೆಂಗಳೂರು ಇತ್ಯಾದಿ ಹೆಚ್ಚಿನ ಕಡೆ 92.50 ರೂಗೆ ಇಳಿದಿದೆ. ಚೆನ್ನೈ ಮೊದಲಾದೆಡೆ 100 ರೂನಲ್ಲಿ ಇದೆ.

Gold Silver Price on 14th January: ಚಿನ್ನ, ಬೆಳ್ಳಿ ಬೆಲೆ ಮತ್ತೆ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 14, 2025 | 10:53 AM

ಬೆಂಗಳೂರು, ಜನವರಿ 14: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮಂಗಳವಾರು ತುಸು ಇಳಿಕೆ ಆಗಿದೆ. ನಿನ್ನೆ ಗ್ರಾಮ್​ಗೆ 40 ರೂನಷ್ಟು ಹೆಚ್ಚಾಗಿದ್ದ ಚಿನ್ನದ ಬೆಲೆ ಇಂದು 10 ರೂನಷ್ಟು ಇಳಿಕೆ ಆಗಿದೆ. ಬೆಳ್ಳಿ ಬೆಲೆ ಇವತ್ತು ಗ್ರಾಮ್​ಗೆ 2 ರೂನಷ್ಟು ಕಡಿಮೆ ಆಗಿದೆ. 18 ಕ್ಯಾರಟ್ ಆಭರಣ ಚಿನ್ನದ ಬೆಲೆ 6,000 ರೂ ಗಡಿಗಿಂತ ತುಸು ಕೆಳಗೆ ಬಂದಿದೆ. ಅಪರಂಜಿ ಚಿನ್ನದ ಬೆಲೆ 8,000 ರೂ ಗಡಿಗಿಂತ ಕಡಿಮೆಗೆ ಬಂದಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ 10 ಗ್ರಾಮ್​ಗೆ 925 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 73,300 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 79,960 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,250 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 73,300 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 9,250 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 14ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,960 ರೂ
  • 18 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 59,970 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 925 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 73,300 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 79,960 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 925 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 73,300 ರೂ
  • ಚೆನ್ನೈ: 73,300 ರೂ
  • ಮುಂಬೈ: 73,300 ರೂ
  • ದೆಹಲಿ: 73,450 ರೂ
  • ಕೋಲ್ಕತಾ: 73,300 ರೂ
  • ಕೇರಳ: 73,300 ರೂ
  • ಅಹ್ಮದಾಬಾದ್: 73,350 ರೂ
  • ಜೈಪುರ್: 73,450 ರೂ
  • ಲಕ್ನೋ: 73,450 ರೂ
  • ಭುವನೇಶ್ವರ್: 73,300 ರೂ

ಇದನ್ನೂ ಓದಿ: Petrol Diesel Price on January 14: 80 ಡಾಲರ್​ ದಾಟಿದ ಕಚ್ಚಾತೈಲ ದರ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,630 ರಿಂಗಿಟ್ (69,760 ರುಪಾಯಿ)
  • ದುಬೈ: 2,992.50 ಡಿರಾಮ್ (70,490 ರುಪಾಯಿ)
  • ಅಮೆರಿಕ: 780 ಡಾಲರ್ (67,490 ರುಪಾಯಿ)
  • ಸಿಂಗಾಪುರ: 1,086 ಸಿಂಗಾಪುರ್ ಡಾಲರ್ (68,590 ರುಪಾಯಿ)
  • ಕತಾರ್: 3,030 ಕತಾರಿ ರಿಯಾಲ್ (71,920 ರೂ)
  • ಸೌದಿ ಅರೇಬಿಯಾ: 3,080 ಸೌದಿ ರಿಯಾಲ್ (70,980 ರುಪಾಯಿ)
  • ಓಮನ್: 318.50 ಒಮಾನಿ ರಿಯಾಲ್ (71,580 ರುಪಾಯಿ)
  • ಕುವೇತ್: 244.60 ಕುವೇತಿ ದಿನಾರ್ (68,540 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 9,250 ರೂ
  • ಚೆನ್ನೈ: 10,000 ರೂ
  • ಮುಂಬೈ: 9,250 ರೂ
  • ದೆಹಲಿ: 9,250 ರೂ
  • ಕೋಲ್ಕತಾ: 9,250 ರೂ
  • ಕೇರಳ: 10,000 ರೂ
  • ಅಹ್ಮದಾಬಾದ್: 9,250 ರೂ
  • ಜೈಪುರ್: 9,250 ರೂ
  • ಲಕ್ನೋ: 9,250 ರೂ
  • ಭುವನೇಶ್ವರ್: 10,000 ರೂ
  • ಪುಣೆ: 9,250

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಹಾಕುಂಭದಲ್ಲಿ ಸಂಕ್ರಾಂತಿಯ ದಿನವಾದ ಇಂದು 2.5 ಕೋಟಿ ಭಕ್ತರಿಂದ ತೀರ್ಥ ಸ್ನಾನ
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ಮಿಡ್ ವೀಕ್ ಎಲಿನಿಮೇಷನ್ ಟಾಸ್ಕ್, ಗೆದ್ದವರ್ಯಾರು? ಸೋತವರ್ಯಾರು?
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ವೇದಿಕೆ ಮೇಲೆ ಚರ್ಚೆಯಲ್ಲಿ ಮಗ್ನರಾದ ಕುಮಾರಸ್ವಾಮಿ ಮತ್ತು ವಿಜಯೇಂದ್ರ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಚಿವೆ ಚೇತರಿಸಿಕೊಳ್ಳುತ್ತಿದ್ದಾರೆ, ಅವರಿಗೆ ವಿಶ್ರಾಂತಿಯ ಅಗತ್ಯವಿದೆ:ಶಶಿಕಲಾ
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್
ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳದ ಸಚಿವೆಯ ಪತಿ ರವೀಂದ್ರ ಹೆಬ್ಬಾಳ್ಕರ್
ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ
ಘಟನೆ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಒಳ್ಳೇದು ಮಾಡಲ್ಲ: ವಿಜಯೇಂದ್ರ