Gold Silver Price on 14 January: ಸತತ ಇಳಿಕೆ ಬಳಿಕ ಎತ್ತರಿಸಿಕೊಂಡ ಚಿನ್ನದ ಬೆಲೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ

| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Jan 14, 2024 | 5:00 AM

Bullion Market 2024, January 14th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,700 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,350 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 14 January: ಸತತ ಇಳಿಕೆ ಬಳಿಕ ಎತ್ತರಿಸಿಕೊಂಡ ಚಿನ್ನದ ಬೆಲೆ; ಇಲ್ಲಿದೆ ಇವತ್ತಿನ ಚಿನ್ನ, ಬೆಳ್ಳಿ ದರಪಟ್ಟಿ
ಚಿನ್ನ
Follow us on

ಬೆಂಗಳೂರು, ಜನವರಿ 14: ಕಳೆದ ಎರಡು ವಾರ ಸತತವಾಗಿ ಇಳಿದಿದ್ದ ಚಿನ್ನದ ಬೆಲೆ (Gold and silver Rates) ತುಸು ಹೆಚ್ಚಾಗಿದೆ. ಕಳೆದ 10 ದಿನದಲ್ಲಿ ಎರಡನೇ ಬಾರಿ ಗೋಲ್ಡ್ ರೇಟ್ ಮೇಲೆ ಜಿಗಿದಿದೆ. ಬೆಳ್ಳಿ ಬೆಲೆ ಎರಡು ವಾರಗಳಿಂದ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,600 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,830 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,600 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,350 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 14ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 735 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,700 ರೂ
  • ಚೆನ್ನೈ: 58,200 ರೂ
  • ಮುಂಬೈ: 57,700 ರೂ
  • ದೆಹಲಿ: 57,850 ರೂ
  • ಕೋಲ್ಕತಾ: 57,700 ರೂ
  • ಕೇರಳ: 57,700 ರೂ
  • ಅಹ್ಮದಾಬಾದ್: 57,750 ರೂ
  • ಜೈಪುರ್: 57,850 ರೂ
  • ಲಕ್ನೋ: 57,850 ರೂ
  • ಭುವನೇಶ್ವರ್: 57,700 ರೂ

ಇದನ್ನೂ ಓದಿ:

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,030 ರಿಂಗಿಟ್ (54,058 ರುಪಾಯಿ)
  • ದುಬೈ: 2,302.50 ಡಿರಾಮ್ (51,979 ರುಪಾಯಿ)
  • ಅಮೆರಿಕ: 630 ಡಾಲರ್ (52,241 ರುಪಾಯಿ)
  • ಸಿಂಗಾಪುರ: 845 ಸಿಂಗಾಪುರ್ ಡಾಲರ್ (52,670 ರುಪಾಯಿ)
  • ಕತಾರ್: 2,365 ಕತಾರಿ ರಿಯಾಲ್ (53,852 ರೂ)
  • ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,398 ರುಪಾಯಿ)
  • ಓಮನ್: 250 ಒಮಾನಿ ರಿಯಾಲ್ (53,878 ರುಪಾಯಿ)
  • ಕುವೇತ್: 197 ಕುವೇತಿ ದಿನಾರ್ (53,162 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,350 ರೂ
  • ಚೆನ್ನೈ: 7,750 ರೂ
  • ಮುಂಬೈ: 7,600 ರೂ
  • ದೆಹಲಿ: 7,600 ರೂ
  • ಕೋಲ್ಕತಾ: 7,600 ರೂ
  • ಕೇರಳ: 7,750 ರೂ
  • ಅಹ್ಮದಾಬಾದ್: 7,600 ರೂ
  • ಜೈಪುರ್: 7,600 ರೂ
  • ಲಕ್ನೋ: 7,600 ರೂ
  • ಭುವನೇಶ್ವರ್: 7,750 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ