AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 18 January: ಚಿನ್ನ ಬೆಳ್ಳಿ ಬೆಲೆ ಎರಡೂ ಕಡಿಮೆ; ಇಲ್ಲಿದೆ ಇವತ್ತಿನ ದರ ಪಟ್ಟಿ

Bullion Market 2024, January 18th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.90 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,700 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,375 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 18 January: ಚಿನ್ನ ಬೆಳ್ಳಿ ಬೆಲೆ ಎರಡೂ ಕಡಿಮೆ; ಇಲ್ಲಿದೆ ಇವತ್ತಿನ ದರ ಪಟ್ಟಿ
ಚಿನ್ನ
TV9 Web
| Edited By: |

Updated on: Jan 18, 2024 | 5:04 AM

Share

ಬೆಂಗಳೂರು, ಜನವರಿ 18: ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇಳಿಕೆ ಮುಂದುವರಿದಿದೆ. ಚಿನ್ನದ ಬೆಲೆ ಗ್ರಾಮ್​ಗೆ ಬರೋಬ್ಬರಿ 35 ರೂನಷ್ಟು ಕಡಿಮೆ ಆಗಿದೆ. ಅತ್ತ ಬೆಳ್ಳಿ ಬೆಲೆ 60 ಪೈಸೆ ತಗ್ಗಿದೆ. ಈ ಅಮೂಲ್ಯ ಲೋಹಗಳ ಬೆಲೆಯಲ್ಲಿ ವ್ಯತ್ಯಯ ಆಗುತ್ತಿರುವುದು ಭಾರತದಲ್ಲಿ ಮಾತ್ರ. ಬಹುತೇಕ ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಕಳೆದ ಹಲವು ವಾರಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆ ಸ್ಥಿರವಾಗಿವೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,590 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,375 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 18ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,700 ರೂ
  • ಚೆನ್ನೈ: 58,100 ರೂ
  • ಮುಂಬೈ: 57,700 ರೂ
  • ದೆಹಲಿ: 57,850 ರೂ
  • ಕೋಲ್ಕತಾ: 57,700 ರೂ
  • ಕೇರಳ: 57,700 ರೂ
  • ಅಹ್ಮದಾಬಾದ್: 57,750 ರೂ
  • ಜೈಪುರ್: 57,850 ರೂ
  • ಲಕ್ನೋ: 57,850 ರೂ
  • ಭುವನೇಶ್ವರ್: 57,700 ರೂ

ಇದನ್ನೂ ಓದಿ: News Alert: ಶುಭ ಸುದ್ದಿ; ಪಿಎಂ ಕಿಸಾನ್ ಫಲಾನುಭವಿಗಳು, ಕಟ್ಟಡ ಕಾರ್ಮಿಕರಿಗೆ 10 ಲಕ್ಷ ರೂವರೆಗೆ ವಿಮಾ ಕವರೇಜ್?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,030 ರಿಂಗಿಟ್ (53,406 ರುಪಾಯಿ)
  • ದುಬೈ: 2,302.50 ಡಿರಾಮ್ (52,132 ರುಪಾಯಿ)
  • ಅಮೆರಿಕ: 630 ಡಾಲರ್ (52,390 ರುಪಾಯಿ)
  • ಸಿಂಗಾಪುರ: 845 ಸಿಂಗಾಪುರ್ ಡಾಲರ್ (52,286 ರುಪಾಯಿ)
  • ಕತಾರ್: 2,365 ಕತಾರಿ ರಿಯಾಲ್ (53,945 ರೂ)
  • ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,569 ರುಪಾಯಿ)
  • ಓಮನ್: 250 ಒಮಾನಿ ರಿಯಾಲ್ (54,000 ರುಪಾಯಿ)
  • ಕುವೇತ್: 197 ಕುವೇತಿ ದಿನಾರ್ (53,206 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,375 ರೂ
  • ಚೆನ್ನೈ: 7,740 ರೂ
  • ಮುಂಬೈ: 7,590 ರೂ
  • ದೆಹಲಿ: 7,590 ರೂ
  • ಕೋಲ್ಕತಾ: 7,590 ರೂ
  • ಕೇರಳ: 7,740 ರೂ
  • ಅಹ್ಮದಾಬಾದ್: 7,590 ರೂ
  • ಜೈಪುರ್: 7,590 ರೂ
  • ಲಕ್ನೋ: 7,590 ರೂ
  • ಭುವನೇಶ್ವರ್: 7,740 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ