Gold Silver Price on 19 January: ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ; ಖರೀದಿಸಲು ಇದು ಸಮಯವಾ?

Bullion Market 2024, January 19th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,620 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.50 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,400 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 19 January: ಚಿನ್ನ, ಬೆಳ್ಳಿ ಬೆಲೆಯಲ್ಲಿ ಮತ್ತೆ ಭಾರೀ ಇಳಿಕೆ; ಖರೀದಿಸಲು ಇದು ಸಮಯವಾ?
ಚಿನ್ನ
Edited By:

Updated on: Jan 19, 2024 | 5:03 AM

ಬೆಂಗಳೂರು, ಜನವರಿ 19: ಈ ವಾರ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಇಳಿಕೆ ಮುಂದುವರಿದಿದೆ. ನಿನ್ನೆ ಗ್ರಾಮ್​ಗೆ 35 ರೂನಷ್ಟು ಇಳಿದಿದ್ದ ಚಿನ್ನದ ಬೆಲೆ ಇಂದೂ ಕೂಡ 30 ರೂನಷ್ಟು ಕಡಿಮೆ ಆಗಿದೆ. ಅತ್ತ ಬೆಳ್ಳಿ ಬೆಲೆ ನಿನ್ನೆ 60 ಪೈಸೆ ತಗ್ಗಿತ್ತು. ಇವತ್ತು 40 ಪೈಸೆಯಷ್ಟು ಅಗ್ಗವಾಗಿದೆ. ವಿದೇಶಗಳಲ್ಲಿ ಕೆಲವೆಡೆ ಚಿನ್ನದ ಬೆಲೆ ಕಡಿಮೆ ಆಗಿದೆ. ಅಮೆರಿಕದಲ್ಲಿ 620 ಡಾಲರ್ ಇದ್ದ ಬೆಲೆ ಈಗ 615 ಡಾಲರ್​ಗೆ ಇಳಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,400 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,620 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,550 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,400 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 19ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 755 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,400 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,620 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,400 ರೂ
  • ಚೆನ್ನೈ: 57,800 ರೂ
  • ಮುಂಬೈ: 57,400 ರೂ
  • ದೆಹಲಿ: 57,550 ರೂ
  • ಕೋಲ್ಕತಾ: 57,300 ರೂ
  • ಕೇರಳ: 57,300 ರೂ
  • ಅಹ್ಮದಾಬಾದ್: 57,450 ರೂ
  • ಜೈಪುರ್: 57,550 ರೂ
  • ಲಕ್ನೋ: 57,550 ರೂ
  • ಭುವನೇಶ್ವರ್: 57,400 ರೂ

ಇದನ್ನೂ ಓದಿ: Haldiram’s: ಮಾರುಕಟ್ಟೆ ವಿಸ್ತರಣೆಗೆ ಹಲ್ದೀರಾಮ್ಸ್ ಚಿತ್ತ; ಬೆಂಗಳೂರಲ್ಲಿ ಫ್ಯಾಕ್ಟರಿ ಇರುವ ಪ್ರತಾಪ್ ಸ್ನ್ಯಾಕ್ಸ್ ಖರೀದಿಗೆ ಆಲೋಚನೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,030 ರಿಂಗಿಟ್ (53,362 ರುಪಾಯಿ)
  • ದುಬೈ: 2,302.50 ಡಿರಾಮ್ (52,117 ರುಪಾಯಿ)
  • ಅಮೆರಿಕ: 615 ಡಾಲರ್ (51,133 ರುಪಾಯಿ)
  • ಸಿಂಗಾಪುರ: 845 ಸಿಂಗಾಪುರ್ ಡಾಲರ್ (52,292 ರುಪಾಯಿ)
  • ಕತಾರ್: 2,365 ಕತಾರಿ ರಿಯಾಲ್ (53,938 ರೂ)
  • ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,539 ರುಪಾಯಿ)
  • ಓಮನ್: 250 ಒಮಾನಿ ರಿಯಾಲ್ (53,989 ರುಪಾಯಿ)
  • ಕುವೇತ್: 197 ಕುವೇತಿ ದಿನಾರ್ (53,219 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,300 ರೂ
  • ಚೆನ್ನೈ: 7,700 ರೂ
  • ಮುಂಬೈ: 7,550 ರೂ
  • ದೆಹಲಿ: 7,550 ರೂ
  • ಕೋಲ್ಕತಾ: 7,550 ರೂ
  • ಕೇರಳ: 7,700 ರೂ
  • ಅಹ್ಮದಾಬಾದ್: 7,550 ರೂ
  • ಜೈಪುರ್: 7,550 ರೂ
  • ಲಕ್ನೋ: 7,550 ರೂ
  • ಭುವನೇಶ್ವರ್: 7,700 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Web contact

TV9 Kannada

Read More
Follow Us