ಬೆಂಗಳೂರು, ಜನವರಿ 01: ಹೊಸ ವರ್ಷದ ಮೊದಲ ದಿನವೇ ಚಿನ್ನದ ಬೆಲೆ ಏರಿಕೆ ಕಂಡಿದೆ. ನಿನ್ನೆ 40 ರೂನಷ್ಟು ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇವತ್ತು ಅಷ್ಟೇ ಪ್ರಮಾಣದಲ್ಲಿ ಹೆಚ್ಚಳವಾಗಿದೆ. 24 ಕ್ಯಾರಟ್ ಚಿನ್ನದ ಬೆಲೆ ಗ್ರಾಮ್ಗೆ ಮತ್ತೊಮ್ಮೆ 7,800 ರೂ ತಲುಪಿದೆ. 22 ಕ್ಯಾರಟ್ ಆಭರಣ ಚಿನ್ನದ ಬೆಲೆ 7,150 ರೂಗೆ ಏರಿದೆ. ಕೆಲ ವಿದೇಶ ಮಾರುಕಟ್ಟೆಗಳಲ್ಲಿ ಚಿನ್ನದ ಬೆಲೆಯಲ್ಲಿ ತುಸು ಏರುಪೇರು ಆಗಿದೆ. ಕಳೆದ ಮೂರ್ನಾಲ್ಕು ವಾರಗಳಿಂದಲೂ ಚಿನ್ನದ ಬೆಲೆ ಇದೇ ರೀತಿಯಲ್ಲಿ ಏರಿಳಿತವಾಗುತ್ತಿದೆ. ಇನ್ನು, ಬೆಳ್ಳಿ ಬೆಲೆ ಇವತ್ತು ವ್ಯತ್ಯಯ ಕಂಡಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 71,500 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 78,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 9,050 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 71,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 9,050 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಭಾರತಕ್ಕೆ 2024ರ ಸಿಹಿ; ಆರ್ಥಿಕತೆಯಿಂದ ಹಿಡಿದು ಬಾಹ್ಯಾಕಾಶದವರೆಗೆ ಭಾರತ ಇಟ್ಟ ದೈತ್ಯ ಹೆಜ್ಜೆಗಳಿವು…
ಈ ವರ್ಷಾಂತ್ಯದೊಳಗೆ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎಂದು ತಜ್ಞರು ಅಂದಾಜು ಮಾಡಿದ್ದರು. ಆದರೆ, ವರ್ಷಾರ್ಧದಲ್ಲೇ ಬೆಲೆ ಆ ಗಡಿ ದಾಟಿ ಹೋಗಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ