ಬೆಂಗಳೂರು, ಜನವರಿ 1: 2023ರ ವರ್ಷದಲ್ಲಿ ಚಿನ್ನದ ಬೆಲೆ (Gold and silver Rates) ಶೇ. 15ಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಹೆಚ್ಚಾಗಿದೆ. 2023ರ ಜನವರಿ 1ರಂದು 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 50,600 ರೂ ಇತ್ತು. ಇದೀಗ ಅದು 58,550 ರೂ ತಲುಪಿದೆ. ಚಿನ್ನದ ಮೇಲೆ ಹೂಡಿಕೆ ಮಾಡಿದವರಿಗೆ ಒಂದು ವರ್ಷದಲ್ಲಿ ಶೇ. 15ಕ್ಕಿಂತಲೂ ಹೆಚ್ಚು ಲಾಭ ಬಂದಂತಾಗಿದೆ. ಬೆಳ್ಳಿ ಬೆಲೆಯೂ ಕೂಡ ಶೇ. 10ಕ್ಕಿಂತಲೂ ಹೆಚ್ಚು ಬೆಳೆದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 58,550 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,870 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,860 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 58,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,600 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Financial Changes: ಬ್ಯಾಂಕ್ ಲಾಕರ್ನಿಂದ ಸಿಮ್ ಕಾರ್ಡ್ವರೆಗೆ, ಜ. 1ರಿಂದ ಆಗುವ ಈ ಹಣಕಾಸು ಬದಲಾವಣೆಗಳು ತಿಳಿದಿರಲಿ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ