AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 21 January: ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಹೆಚ್ಚಳ; ದುಬೈನಲ್ಲಿ ಕಡಿಮೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024, January 21st: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 75.70 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 57,700 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 21 January: ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಹೆಚ್ಚಳ; ದುಬೈನಲ್ಲಿ ಕಡಿಮೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on:Jan 22, 2024 | 11:41 AM

Share

ಬೆಂಗಳೂರು, ಜನವರಿ 21: ವಾರದ ದಿನಗಳಲ್ಲಿ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ವಾರಾಂತ್ಯದಲ್ಲಿ ಹೆಚ್ಚಳವಾಗಿದೆ. ಎರಡು ದಿನಗಳಿಂದ ಗ್ರಾಮ್​ಗೆ 65 ರೂನಷ್ಟು ಇಳಿದಿದ್ದ ಚಿನ್ನದ ಬೆಲೆ ಇದೀಗ ಗ್ರಾಮ್​ಗೆ 40 ರೂ ಮೇಲೆ ಜಿಗಿದಿದೆ. ಬೆಳ್ಳಿ ಬೆಲೆಯೂ ಗ್ರಾಮ್​ಗೆ 20 ಪೈಸೆಯಷ್ಟು ಹೆಚ್ಚಾಗಿದೆ. ವಿದೇಶ ಮಾರುಕಟ್ಟೆಗಳ ಪೈಕಿ ಯುಎಇಯಲ್ಲಿ ಮಾತ್ರವೇ ತುಸು ಕಡಿಮೆ ಆಗಿದೆ. ಉಳಿದ ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,570 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 21ಕ್ಕೆ)

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 757 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 57,700 ರೂ
  • ಚೆನ್ನೈ: 58,100 ರೂ
  • ಮುಂಬೈ: 57,700 ರೂ
  • ದೆಹಲಿ: 57,850 ರೂ
  • ಕೋಲ್ಕತಾ: 57,700 ರೂ
  • ಕೇರಳ: 57,700 ರೂ
  • ಅಹ್ಮದಾಬಾದ್: 57,850 ರೂ
  • ಜೈಪುರ್: 57,950 ರೂ
  • ಲಕ್ನೋ: 57,950 ರೂ
  • ಭುವನೇಶ್ವರ್: 57,700 ರೂ

ಇದನ್ನೂ ಓದಿ: Masala Chai: ವಿಶ್ವದ ಅತ್ಯಂತ ಜನಪ್ರಿಯ ಪಾನೀಯಗಳು; ಭಾರತದ ಮಸಾಲ ಚಾಯ್ ಎರಡನೇ ಸ್ಥಾನದಲ್ಲಿ; ಅಗ್ರಸ್ಥಾನ ಯಾವುದಕ್ಕೆ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಮಲೇಷ್ಯಾ: 3,030 ರಿಂಗಿಟ್ (53,372 ರುಪಾಯಿ)
  • ದುಬೈ: 2,267.50 ಡಿರಾಮ್ (51,296 ರುಪಾಯಿ)
  • ಅಮೆರಿಕ: 615 ಡಾಲರ್ (51,104 ರುಪಾಯಿ)
  • ಸಿಂಗಾಪುರ: 845 ಸಿಂಗಾಪುರ್ ಡಾಲರ್ (52,352 ರುಪಾಯಿ)
  • ಕತಾರ್: 2,365 ಕತಾರಿ ರಿಯಾಲ್ (53,908 ರೂ)
  • ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,508 ರುಪಾಯಿ)
  • ಓಮನ್: 250 ಒಮಾನಿ ರಿಯಾಲ್ (53,962 ರುಪಾಯಿ)
  • ಕುವೇತ್: 197 ಕುವೇತಿ ದಿನಾರ್ (53,169 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,300 ರೂ
  • ಚೆನ್ನೈ: 7,720 ರೂ
  • ಮುಂಬೈ: 7,570 ರೂ
  • ದೆಹಲಿ: 7,570 ರೂ
  • ಕೋಲ್ಕತಾ: 7,570 ರೂ
  • ಕೇರಳ: 7,720 ರೂ
  • ಅಹ್ಮದಾಬಾದ್: 7,570 ರೂ
  • ಜೈಪುರ್: 7,570 ರೂ
  • ಲಕ್ನೋ: 7,570 ರೂ
  • ಭುವನೇಶ್ವರ್: 7,720 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:06 am, Sun, 21 January 24

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ