ಬೆಂಗಳೂರು, ಜನವರಿ 21: ವಾರದ ದಿನಗಳಲ್ಲಿ ಇಳಿಕೆ ಕಂಡಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ವಾರಾಂತ್ಯದಲ್ಲಿ ಹೆಚ್ಚಳವಾಗಿದೆ. ಎರಡು ದಿನಗಳಿಂದ ಗ್ರಾಮ್ಗೆ 65 ರೂನಷ್ಟು ಇಳಿದಿದ್ದ ಚಿನ್ನದ ಬೆಲೆ ಇದೀಗ ಗ್ರಾಮ್ಗೆ 40 ರೂ ಮೇಲೆ ಜಿಗಿದಿದೆ. ಬೆಳ್ಳಿ ಬೆಲೆಯೂ ಗ್ರಾಮ್ಗೆ 20 ಪೈಸೆಯಷ್ಟು ಹೆಚ್ಚಾಗಿದೆ. ವಿದೇಶ ಮಾರುಕಟ್ಟೆಗಳ ಪೈಕಿ ಯುಎಇಯಲ್ಲಿ ಮಾತ್ರವೇ ತುಸು ಕಡಿಮೆ ಆಗಿದೆ. ಉಳಿದ ಕಡೆ ಬೆಲೆ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,570 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,300 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Masala Chai: ವಿಶ್ವದ ಅತ್ಯಂತ ಜನಪ್ರಿಯ ಪಾನೀಯಗಳು; ಭಾರತದ ಮಸಾಲ ಚಾಯ್ ಎರಡನೇ ಸ್ಥಾನದಲ್ಲಿ; ಅಗ್ರಸ್ಥಾನ ಯಾವುದಕ್ಕೆ?
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 5:06 am, Sun, 21 January 24