ಬೆಂಗಳೂರು, ಜನವರಿ 24: ಚಿನ್ನದ ಬೆಲೆ (Gold and silver Rates) ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಕಳೆದ ಎರಡು ದಿನಗಳಿಂದ ಬೆಲೆ ವ್ಯತ್ಯಯ ಆಗಿಲ್ಲ. ವಿದೇಶಗಳ ಪೈಕಿ ಯುಎಇ ಮೊದಲಾದ ಕೆಲವೆಡೆ ತುಸು ಬೆಲೆ ಹೆಚ್ಚಾಗಿದೆ. ಉಳಿದಂತೆ ಅಲ್ಲಿಯೂ ಚಿನ್ನದ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಇನ್ನು ಭಾರತದಲ್ಲಿ ಬೆಳ್ಳಿ ಬೆಲೆ ಗ್ರಾಮ್ಗೆ 50 ಪೈಸೆ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,050 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,500 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,300 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Agricultural Credit: ಕೃಷಿ ಸಾಲದ ಗುರಿಯನ್ನು 22ರಿಂದ 25 ಲಕ್ಷ ಕೋಟಿ ರೂಗೆ ಹೆಚ್ಚಿಸುವ ಸಾಧ್ಯತೆ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ