ಬೆಂಗಳೂರು, ಜನವರಿ 25: ಭಾರತದಲ್ಲಿ ಚಿನ್ನದ ಬೆಲೆ (Gold and silver Rates) ತುಸು ಕಡಿಮೆ ಆಗಿದೆಯಾದರೂ ಜಾಗತಿಕವಾಗಿ ಭರ್ಜರಿ ಬೆಲೆ ಹೆಚ್ಚಳವಾಗಿದೆ. ಹಲವು ದಿನಗಳಿಂದ ಯಥಾಸ್ಥಿತಿಯಲ್ಲಿದ್ದ ಬೆಲೆ ದಿಢೀರ್ ಹೈಜಂಪ್ ಮಾಡಿದೆ. ಭಾರತದಲ್ಲೂ ಒಂದಷ್ಟು ಏರಿಕೆಯಾಗಬಹುದು. ಬೆಳ್ಳಿ ಬೆಲೆ ಭಾರತದಲ್ಲಿ ಅಲ್ಪ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,750 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,000 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,530 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,750 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,275 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Zee vs Sony: ಕೈಕೊಟ್ಟ ಸೋನಿ; ಕಂಪನಿ ಕಾನೂನು ನ್ಯಾಯಮಂಡಳಿ ಮೊರೆಹೋದ ಝೀ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ