Gold Silver Price on 26 January: ಭಾರತದಲ್ಲಿ ಚಿನ್ನದ ಬೆಲೆ ಏರಿಕೆ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
Bullion Market 2024, January 26th: ಭಾರತದಲ್ಲಿ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್ಗೆ 76.00 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ನ 10 ಗ್ರಾಮ್ ಚಿನ್ನದ ಬೆಲೆ 57,700 ರೂ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,275 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.
ಬೆಂಗಳೂರು, ಜನವರಿ 26: ಭಾರತದಲ್ಲಿ ಚಿನ್ನದ ಬೆಲೆ (Gold and silver Rates) ಮತ್ತೆ ಇಳಿಕೆಯಾಗಿದೆ. ಜಾಗತಿಕವಾಗಿ ದಿಢೀರ್ ಏರಿಕೆಯಾಗಿದ್ದ ಚಿನ್ನದ ಬೆಲೆ ಅಷ್ಟೇ ಬೇಗ ಇಳಿಕೆಯಾಗಿ ಮೊನ್ನೆಯ ದರಕ್ಕೆ ಬಂದಿದೆ. ಭಾರತದಲ್ಲಿ ಚಿನ್ನ ತುಸು ಅಗ್ಗವಾದರೂ ಬೆಳ್ಳಿ ಬೆಲೆ ಸತತವಾಗಿ ಹೆಚ್ಚಳವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 62,950 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,275 ರುಪಾಯಿಯಲ್ಲಿ ಇದೆ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 26ಕ್ಕೆ)
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 753 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 57,700 ರೂ
- 24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 62,950 ರೂ
- ಬೆಳ್ಳಿ ಬೆಲೆ 10 ಗ್ರಾಂಗೆ: 727.50 ರೂ
ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಬೆಂಗಳೂರು: 57,700 ರೂ
- ಚೆನ್ನೈ: 58,300 ರೂ
- ಮುಂಬೈ: 57,700 ರೂ
- ದೆಹಲಿ: 57,850 ರೂ
- ಕೋಲ್ಕತಾ: 57,700 ರೂ
- ಕೇರಳ: 57,700 ರೂ
- ಅಹ್ಮದಾಬಾದ್: 57,750 ರೂ
- ಜೈಪುರ್: 57,850 ರೂ
- ಲಕ್ನೋ: 57,850 ರೂ
- ಭುವನೇಶ್ವರ್: 57,700 ರೂ
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್ಗೆ)
- ಮಲೇಷ್ಯಾ: 3,030 ರಿಂಗಿಟ್ (53,250 ರುಪಾಯಿ)
- ದುಬೈ: 2,260 ಡಿರಾಮ್ (51,147 ರುಪಾಯಿ)
- ಅಮೆರಿಕ: 620 ಡಾಲರ್ (51,537 ರುಪಾಯಿ)
- ಸಿಂಗಾಪುರ: 840 ಸಿಂಗಾಪುರ್ ಡಾಲರ್ (52,109 ರುಪಾಯಿ)
- ಕತಾರ್: 2,325 ಕತಾರಿ ರಿಯಾಲ್ (53,031 ರೂ)
- ಸೌದಿ ಅರೇಬಿಯಾ: 2,330 ಸೌದಿ ರಿಯಾಲ್ (51,666 ರುಪಾಯಿ)
- ಓಮನ್: 245.50 ಒಮಾನಿ ರಿಯಾಲ್ (53,006 ರುಪಾಯಿ)
- ಕುವೇತ್: 193.50 ಕುವೇತಿ ದಿನಾರ್ (52,294 ರುಪಾಯಿ)
ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್ಗೆ)
- ಬೆಂಗಳೂರು: 7,275 ರೂ
- ಚೆನ್ನೈ: 7,750 ರೂ
- ಮುಂಬೈ: 7,600 ರೂ
- ದೆಹಲಿ: 7,600 ರೂ
- ಕೋಲ್ಕತಾ: 7,600 ರೂ
- ಕೇರಳ: 7,750 ರೂ
- ಅಹ್ಮದಾಬಾದ್: 7,600 ರೂ
- ಜೈಪುರ್: 7,600 ರೂ
- ಲಕ್ನೋ: 7,600 ರೂ
- ಭುವನೇಶ್ವರ್: 7,750 ರೂ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ