ಬೆಂಗಳೂರು, ಜನವರಿ 28: ದೇಶ ವಿದೇಶಗಳಲ್ಲಿ ಚಿನ್ನದ ಬೆಲೆ (Gold and silver Rates) ಹೆಚ್ಚಾಗಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್ಗೆ 10 ರೂನಷ್ಟು ಹೆಚ್ಚಾಗಿದೆ. ಬೆಳ್ಳಿ ಬೆಲೆ ಗ್ರಾಮ್ಗೆ 50 ಪೈಸೆ ಜಾಸ್ತಿಯಾಗಿದೆ. ವಿದೇಶಗಳಲ್ಲಿ ಬಹುತೇಕ ಮಾರುಕಟ್ಟೆಯಲ್ಲಿ ಚಿನ್ನ ದುಬಾರಿಯಾಗಿದೆ. ಅಮೆರಿಕದ ಆರ್ಥಿಕತೆ ವೃದ್ಧಿ ಕಂಡ ಪರಿಣಾಮ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿರುವಂತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 57,800 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,050 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,660 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 57,800 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,350 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Forex: ಭಾರತದ ವಿದೇಶೀ ವಿನಿಮಯ ಮೀಸಲು ನಿಧಿ ಮತ್ತಷ್ಟು ಇಳಿಕೆ; 616.14 ಬಿಲಿಯನ್ ಡಾಲರ್ ತಲುಪಿದ ಫಾರೆಕ್ಸ್ ರಿಸರ್ವ್ಸ್
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ