ಬೆಂಗಳೂರು, ಜನವರಿ 3: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಎರಡೂ ಹೆಚ್ಚಾಗಿವೆ. ವಿದೇಶೀ ಮಾರುಕಟ್ಟೆಗಳಲ್ಲಿ ಬೆಲೆ ವ್ಯತ್ಯಯವಾಗಿಲ್ಲ. ಈ ವರ್ಷ ಅಪರಂಜಿ ಚಿನ್ನದ ಬೆಲೆ ಗ್ರಾಮ್ಗೆ 7 ಸಾವಿರ ರೂ ತಲುಪಬಹುದು ಎಂದು ಈ ಉದ್ಯಮದವರ ಅನಿಸಿಕೆ. ವರ್ಷದ ಆರಂಭದಲ್ಲಿ ಈ ಚಿನ್ನದ ಬೆಲೆ 6,000 ರೂ ಇದೆ. ಈ ವರ್ಷದ ಬಳಿಕ ಶೇ. 16ರಷ್ಟು ಬೆಲೆ ಹೆಚ್ಚಳವಾಗಲಿದೆ. ಕಳೆದ ವರ್ಷವೂ ಚಿನ್ನದ ಬೆಲೆ ಶೇ. 15ರಷ್ಟು ಹೆಚ್ಚಾಗಿತ್ತು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 58,550 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,870 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,860 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 58,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,600 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: ಕ್ರಿಕೆಟ್ ಬದಲು ಕಾರ್ಪೊರೇಟ್ ಜಗತ್ತಿಗೆ ಅಡಿ ಇಟ್ಟ ಸನಾ; ಮಾಜಿ ಕ್ಯಾಪ್ಟನ್ ಗಂಗೂಲಿ ಮಗಳ ಸಂಬಳ ಎಷ್ಟು?
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ