AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 04 January: ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಇಳಿಮುಖ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024, January 4th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,820 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 78.60 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 58,500 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,650 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 04 January: ಭಾರತದಲ್ಲಿ ಚಿನ್ನ, ಬೆಳ್ಳಿ ಬೆಲೆ ಇಳಿಮುಖ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Jan 04, 2024 | 4:58 AM

Share

ಬೆಂಗಳೂರು, ಜನವರಿ 4: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಈ ವರ್ಷದಲ್ಲಿ ಮೊದಲ ಬಾರಿಗೆ ಇಳಿಕೆ ಆಗಿವೆ. ವಿದೇಶೀ ಮಾರುಕಟ್ಟೆಗಳಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಅಮೆರಿಕದಲ್ಲಿ ಬಡ್ಡಿದರ ಹೆಚ್ಚಳದ ನಿರ್ಧಾರ ಬರುವವರೆಗೂ ಚಿನ್ನದ ಬೆಲೆ ಬಹುತೇಕ ನಿಶ್ಚಲವಾಗಿರಬಹುದು ಎಂದು ಹೇಳಲಾಗುತ್ತಿದೆ. ಒಟ್ಟಾರೆ, ಈ ವರ್ಷ ಅಪರಂಜಿ ಚಿನ್ನದ ಬೆಲೆ ಭಾರತದಲ್ಲಿ ಗ್ರಾಮ್​ಗೆ 7 ಸಾವಿರ ರೂ ತಲುಪಬಹುದು ಎಂದು ಈ ಉದ್ಯಮದವರ ಅನಿಸಿಕೆ. ವರ್ಷದ ಆರಂಭದಲ್ಲಿ ಈ ಚಿನ್ನದ ಬೆಲೆ 6,000 ರೂ ಇದೆ. ಈ ವರ್ಷದ ಬಳಿಕ ಶೇ. 16ರಷ್ಟು ಬೆಲೆ ಹೆಚ್ಚಳವಾಗಲಿದೆ. ಕಳೆದ ವರ್ಷವೂ ಚಿನ್ನದ ಬೆಲೆ ಶೇ. 15ರಷ್ಟು ಹೆಚ್ಚಾಗಿತ್ತು. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,500 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,860 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,650 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 4ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,820 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 786 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,500 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,820 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 765 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,500 ರೂ
  • ಚೆನ್ನೈ: 59,150 ರೂ
  • ಮುಂಬೈ: 58,500 ರೂ
  • ದೆಹಲಿ: 58,650 ರೂ
  • ಕೋಲ್ಕತಾ: 58,500 ರೂ
  • ಕೇರಳ: 58,500 ರೂ
  • ಅಹ್ಮದಾಬಾದ್: 58,550 ರೂ
  • ಜೈಪುರ್: 58,650 ರೂ
  • ಲಕ್ನೋ: 58,650 ರೂ
  • ಭುವನೇಶ್ವರ್: 58,500 ರೂ

ಇದನ್ನೂ ಓದಿ: Gold: ಕಳೆದ ಎರಡು ವರ್ಷ ಶೇ. 14ಕ್ಕಿಂತಲೂ ಹೆಚ್ಚು ದರದಲ್ಲಿ ಬೆಳೆದಿರುವ ಚಿನ್ನದ ಬೆಲೆ ಈ ವರ್ಷ ಎಷ್ಟಾಗಬಹುದು?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 3,030 ರಿಂಗಿಟ್ (54,470 ರುಪಾಯಿ)
  • ದುಬೈ: 2,302.50 ಡಿರಾಮ್ (52,214 ರುಪಾಯಿ)
  • ಅಮೆರಿಕ: 630 ಡಾಲರ್ (52,470 ರುಪಾಯಿ)
  • ಸಿಂಗಾಪುರ: 845 ಸಿಂಗಾಪುರ್ ಡಾಲರ್ (53,038 ರುಪಾಯಿ)
  • ಕತಾರ್: 2,365 ಕತಾರಿ ರಿಯಾಲ್ (54,090 ರೂ)
  • ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,633 ರುಪಾಯಿ)
  • ಓಮನ್: 250 ಒಮಾನಿ ರಿಯಾಲ್ (54,115 ರುಪಾಯಿ)
  • ಕುವೇತ್: 197 ಕುವೇತಿ ದಿನಾರ್ (53,350 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,650 ರೂ
  • ಚೆನ್ನೈ: 8,000 ರೂ
  • ಮುಂಬೈ: 7,860 ರೂ
  • ದೆಹಲಿ: 7,860 ರೂ
  • ಕೋಲ್ಕತಾ: 7,860 ರೂ
  • ಕೇರಳ: 8,000 ರೂ
  • ಅಹ್ಮದಾಬಾದ್: 7,860 ರೂ
  • ಜೈಪುರ್: 7,860 ರೂ
  • ಲಕ್ನೋ: 7,860 ರೂ
  • ಭುವನೇಶ್ವರ್: 8,000 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!