ಬೆಂಗಳೂರು, ಜನವರಿ 4: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು (Gold and silver Rates) ಈ ವರ್ಷದಲ್ಲಿ ಮೊದಲ ಬಾರಿಗೆ ಇಳಿಕೆ ಆಗಿವೆ. ವಿದೇಶೀ ಮಾರುಕಟ್ಟೆಗಳಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಅಮೆರಿಕದಲ್ಲಿ ಬಡ್ಡಿದರ ಹೆಚ್ಚಳದ ನಿರ್ಧಾರ ಬರುವವರೆಗೂ ಚಿನ್ನದ ಬೆಲೆ ಬಹುತೇಕ ನಿಶ್ಚಲವಾಗಿರಬಹುದು ಎಂದು ಹೇಳಲಾಗುತ್ತಿದೆ. ಒಟ್ಟಾರೆ, ಈ ವರ್ಷ ಅಪರಂಜಿ ಚಿನ್ನದ ಬೆಲೆ ಭಾರತದಲ್ಲಿ ಗ್ರಾಮ್ಗೆ 7 ಸಾವಿರ ರೂ ತಲುಪಬಹುದು ಎಂದು ಈ ಉದ್ಯಮದವರ ಅನಿಸಿಕೆ. ವರ್ಷದ ಆರಂಭದಲ್ಲಿ ಈ ಚಿನ್ನದ ಬೆಲೆ 6,000 ರೂ ಇದೆ. ಈ ವರ್ಷದ ಬಳಿಕ ಶೇ. 16ರಷ್ಟು ಬೆಲೆ ಹೆಚ್ಚಳವಾಗಲಿದೆ. ಕಳೆದ ವರ್ಷವೂ ಚಿನ್ನದ ಬೆಲೆ ಶೇ. 15ರಷ್ಟು ಹೆಚ್ಚಾಗಿತ್ತು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 58,500 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,820 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,860 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 58,500 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,650 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Gold: ಕಳೆದ ಎರಡು ವರ್ಷ ಶೇ. 14ಕ್ಕಿಂತಲೂ ಹೆಚ್ಚು ದರದಲ್ಲಿ ಬೆಳೆದಿರುವ ಚಿನ್ನದ ಬೆಲೆ ಈ ವರ್ಷ ಎಷ್ಟಾಗಬಹುದು?
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ