Gold Silver Price on 05 January: ಭಾರತದಲ್ಲಿ ಚಿನ್ನ, ಬೆಳ್ಳೆ ಬೆಲೆ ಸತತವಾಗಿ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

| Updated By: ಸುಗ್ಗನಹಳ್ಳಿ ವಿಜಯಸಾರಥಿ

Updated on: Jan 05, 2024 | 5:09 AM

Bullion Market 2024, January 5th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,380 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.60 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 58,100 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,500 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 05 January: ಭಾರತದಲ್ಲಿ ಚಿನ್ನ, ಬೆಳ್ಳೆ ಬೆಲೆ ಸತತವಾಗಿ ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
Follow us on

ಬೆಂಗಳೂರು, ಜನವರಿ 5: ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳ ಇಳಿಕೆ (Gold and silver Rates) ಮುಂದುವರಿದಿದೆ. ವಿದೇಶೀ ಮಾರುಕಟ್ಟೆಗಳಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಚಿನ್ನದ ಬೆಲೆ ಗ್ರಾಮ್​ಗೆ 40 ರೂ ಇಳಿದರೆ, ಬೆಳ್ಳಿ ಬೆಲೆ ಗ್ರಾಮ್​ಗೆ 2 ರೂನಷ್ಟು ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,100 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,380 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,660 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,100 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,500 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 5ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 766 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,100 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,380 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,100 ರೂ
  • ಚೆನ್ನೈ: 58,700 ರೂ
  • ಮುಂಬೈ: 58,100 ರೂ
  • ದೆಹಲಿ: 58,250 ರೂ
  • ಕೋಲ್ಕತಾ: 58,100 ರೂ
  • ಕೇರಳ: 58,100 ರೂ
  • ಅಹ್ಮದಾಬಾದ್: 58,150 ರೂ
  • ಜೈಪುರ್: 58,250 ರೂ
  • ಲಕ್ನೋ: 58,250 ರೂ
  • ಭುವನೇಶ್ವರ್: 58,100 ರೂ

ಇದನ್ನೂ ಓದಿ: DA Hike: ಸರ್ಕಾರಿ ಉದ್ಯೋಗಿಗಳಿಗೆ ಶೇ. 4ರಷ್ಟು ಡಿಎ, ಡಿಆರ್ ಹೆಚ್ಚಳ ಸಾಧ್ಯತೆ; ಮಾರ್ಚ್​ನಲ್ಲಿ ನಿರ್ಧಾರ ಪ್ರಕಟ; ಸಂಬಳ ಹೆಚ್ಚಳ ಎಷ್ಟಾಗಬಹುದು?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 3,030 ರಿಂಗಿಟ್ (54,420 ರುಪಾಯಿ)
  • ದುಬೈ: 2,302.50 ಡಿರಾಮ್ (52,188 ರುಪಾಯಿ)
  • ಅಮೆರಿಕ: 630 ಡಾಲರ್ (52,447 ರುಪಾಯಿ)
  • ಸಿಂಗಾಪುರ: 845 ಸಿಂಗಾಪುರ್ ಡಾಲರ್ (52,909 ರುಪಾಯಿ)
  • ಕತಾರ್: 2,365 ಕತಾರಿ ರಿಯಾಲ್ (54,065 ರೂ)
  • ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,606 ರುಪಾಯಿ)
  • ಓಮನ್: 250 ಒಮಾನಿ ರಿಯಾಲ್ (54,092 ರುಪಾಯಿ)
  • ಕುವೇತ್: 197 ಕುವೇತಿ ದಿನಾರ್ (53,335 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,500 ರೂ
  • ಚೆನ್ನೈ: 7,800 ರೂ
  • ಮುಂಬೈ: 7,660 ರೂ
  • ದೆಹಲಿ: 7,660 ರೂ
  • ಕೋಲ್ಕತಾ: 7,660 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,660 ರೂ
  • ಜೈಪುರ್: 7,660 ರೂ
  • ಲಕ್ನೋ: 7,660 ರೂ
  • ಭುವನೇಶ್ವರ್: 7,800 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ