AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 07 January: ಭಾರತದಲ್ಲಿ ಚಿನ್ನದ ಬೆಲೆ ಈ ವಾರ 750 ರೂನಷ್ಟು ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024, January 7th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,270 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.60 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 58,000 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 07 January: ಭಾರತದಲ್ಲಿ ಚಿನ್ನದ ಬೆಲೆ ಈ ವಾರ 750 ರೂನಷ್ಟು ಇಳಿಕೆ; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Jan 07, 2024 | 5:00 AM

Share

ಬೆಂಗಳೂರು, ಜನವರಿ 7: ಕಳೆದ ಒಂದೆರಡು ವಾರ ಸಿಕ್ಕಾಪಟ್ಟೆ ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳೂ (Gold and silver Rates) ಭಾರತದಲ್ಲಿ ಈ ವಾರ ಸತತವಾಗಿ ಇಳಿದಿದೆ. ವರ್ಷಾರಂಭದಲ್ಲಿ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ 58,750 ರೂ ಇದ್ದದ್ದು ಈಗ 750 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಸಾಕಷ್ಟು ಇಳಿದಿದೆ. ಇದೇ ವೇಳೆ ವಿದೇಶೀ ಮಾರುಕಟ್ಟೆಗಳಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,270 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,660 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 7ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 766 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,000 ರೂ
  • ಚೆನ್ನೈ: 58,600 ರೂ
  • ಮುಂಬೈ: 58,000 ರೂ
  • ದೆಹಲಿ: 58,150 ರೂ
  • ಕೋಲ್ಕತಾ: 58,000 ರೂ
  • ಕೇರಳ: 58,000 ರೂ
  • ಅಹ್ಮದಾಬಾದ್: 58,050 ರೂ
  • ಜೈಪುರ್: 58,150 ರೂ
  • ಲಕ್ನೋ: 58,150 ರೂ
  • ಭುವನೇಶ್ವರ್: 58,000 ರೂ

ಇದನ್ನೂ ಓದಿ: IPOs in January: ಈ ಜನವರಿ ತಿಂಗಳಲ್ಲಿ ಮೆಡಿ ಅಸಿಸ್ಟ್ ಸೇರಿದಂತೆ 5 ಸಂಸ್ಥೆಗಳಿಂದ ಐಪಿಒ ಬಿಡುಗಡೆ ಸಾಧ್ಯತೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 3,030 ರಿಂಗಿಟ್ (54,105 ರುಪಾಯಿ)
  • ದುಬೈ: 2,302.50 ಡಿರಾಮ್ (52,112 ರುಪಾಯಿ)
  • ಅಮೆರಿಕ: 630 ಡಾಲರ್ (52,369 ರುಪಾಯಿ)
  • ಸಿಂಗಾಪುರ: 845 ಸಿಂಗಾಪುರ್ ಡಾಲರ್ (52,764 ರುಪಾಯಿ)
  • ಕತಾರ್: 2,365 ಕತಾರಿ ರಿಯಾಲ್ (53,986 ರೂ)
  • ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,528 ರುಪಾಯಿ)
  • ಓಮನ್: 250 ಒಮಾನಿ ರಿಯಾಲ್ (54,014 ರುಪಾಯಿ)
  • ಕುವೇತ್: 197 ಕುವೇತಿ ದಿನಾರ್ (53,237 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,800 ರೂ
  • ಮುಂಬೈ: 7,660 ರೂ
  • ದೆಹಲಿ: 7,660 ರೂ
  • ಕೋಲ್ಕತಾ: 7,660 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,660 ರೂ
  • ಜೈಪುರ್: 7,660 ರೂ
  • ಲಕ್ನೋ: 7,660 ರೂ
  • ಭುವನೇಶ್ವರ್: 7,800 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ