AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gold Silver Price on 08 January: ಎರಡು ವಾರ ಹೆಚ್ಚಳದ ಬಳಿಕ ತಣ್ಣಗಾದ ಚಿನ್ನ, ಬೆಳ್ಳಿ ಬೆಲೆಗಳು; ಇಲ್ಲಿದೆ ಇವತ್ತಿನ ದರಪಟ್ಟಿ

Bullion Market 2024, January 8th: ಭಾರತದಲ್ಲಿ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,270 ರುಪಾಯಿ ಇದೆ. ಬೆಳ್ಳಿ ಬೆಲೆ ಒಂದು ಗ್ರಾಮ್​ಗೆ 76.60 ರು ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್​ನ 10 ಗ್ರಾಮ್ ಚಿನ್ನದ ಬೆಲೆ 58,000 ರೂ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರೂ ಇದೆ. ಯಾವ್ಯಾವ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ, ಡೀಟೇಲ್ಸ್ ನೋಡಿ.

Gold Silver Price on 08 January: ಎರಡು ವಾರ ಹೆಚ್ಚಳದ ಬಳಿಕ ತಣ್ಣಗಾದ ಚಿನ್ನ, ಬೆಳ್ಳಿ ಬೆಲೆಗಳು; ಇಲ್ಲಿದೆ ಇವತ್ತಿನ ದರಪಟ್ಟಿ
ಚಿನ್ನ
TV9 Web
| Edited By: |

Updated on: Jan 08, 2024 | 5:00 AM

Share

ಬೆಂಗಳೂರು, ಜನವರಿ 8: ಕಳೆದ ಎರಡು ವಾರ ಸಿಕ್ಕಾಪಟ್ಟೆ ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳೂ (Gold and silver Rates) ಭಾರತದಲ್ಲಿ ಈ ವಾರ ಸತತವಾಗಿ ಇಳಿದಿದೆ. ವರ್ಷಾರಂಭದಲ್ಲಿ 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ 58,750 ರೂ ಇದ್ದದ್ದು ಈಗ 750 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಸಾಕಷ್ಟು ಇಳಿದಿದೆ. ಇದೇ ವೇಳೆ ವಿದೇಶೀ ಮಾರುಕಟ್ಟೆಗಳಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 58,000 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 63,270 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,660 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 58,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,400 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 8ಕ್ಕೆ):

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 766 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 58,000 ರೂ
  • 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 63,270 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 740 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

  • ಬೆಂಗಳೂರು: 58,000 ರೂ
  • ಚೆನ್ನೈ: 58,500 ರೂ
  • ಮುಂಬೈ: 58,000 ರೂ
  • ದೆಹಲಿ: 58,150 ರೂ
  • ಕೋಲ್ಕತಾ: 58,000 ರೂ
  • ಕೇರಳ: 58,000 ರೂ
  • ಅಹ್ಮದಾಬಾದ್: 58,050 ರೂ
  • ಜೈಪುರ್: 58,150 ರೂ
  • ಲಕ್ನೋ: 58,150 ರೂ
  • ಭುವನೇಶ್ವರ್: 58,000 ರೂ

ಇದನ್ನೂ ಓದಿ: Forex: ಭಾರತದ ಫಾರೆಕ್ಸ್ ರಿಸರ್ವ್ಸ್ 623 ಬಿಲಿಯನ್ ಡಾಲರ್​ಗೆ ಹೆಚ್ಚಳ; ಸತತ 7ನೇ ವಾರ ಏರಿಕೆ; 22 ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ):

  • ಮಲೇಷ್ಯಾ: 3,030 ರಿಂಗಿಟ್ (54,112 ರುಪಾಯಿ)
  • ದುಬೈ: 2,302.50 ಡಿರಾಮ್ (52,119 ರುಪಾಯಿ)
  • ಅಮೆರಿಕ: 630 ಡಾಲರ್ (52,377 ರುಪಾಯಿ)
  • ಸಿಂಗಾಪುರ: 845 ಸಿಂಗಾಪುರ್ ಡಾಲರ್ (52,830 ರುಪಾಯಿ)
  • ಕತಾರ್: 2,365 ಕತಾರಿ ರಿಯಾಲ್ (53,993 ರೂ)
  • ಸೌದಿ ಅರೇಬಿಯಾ: 2,370 ಸೌದಿ ರಿಯಾಲ್ (52,537 ರುಪಾಯಿ)
  • ಓಮನ್: 250 ಒಮಾನಿ ರಿಯಾಲ್ (54,021 ರುಪಾಯಿ)
  • ಕುವೇತ್: 197 ಕುವೇತಿ ದಿನಾರ್ (53,257 ರುಪಾಯಿ)

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,400 ರೂ
  • ಚೆನ್ನೈ: 7,800 ರೂ
  • ಮುಂಬೈ: 7,660 ರೂ
  • ದೆಹಲಿ: 7,660 ರೂ
  • ಕೋಲ್ಕತಾ: 7,660 ರೂ
  • ಕೇರಳ: 7,800 ರೂ
  • ಅಹ್ಮದಾಬಾದ್: 7,660 ರೂ
  • ಜೈಪುರ್: 7,660 ರೂ
  • ಲಕ್ನೋ: 7,660 ರೂ
  • ಭುವನೇಶ್ವರ್: 7,800 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್​ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?