ಬೆಂಗಳೂರು, ಜನವರಿ 8: ಕಳೆದ ಎರಡು ವಾರ ಸಿಕ್ಕಾಪಟ್ಟೆ ಏರಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆಗಳೂ (Gold and silver Rates) ಭಾರತದಲ್ಲಿ ಈ ವಾರ ಸತತವಾಗಿ ಇಳಿದಿದೆ. ವರ್ಷಾರಂಭದಲ್ಲಿ 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 58,750 ರೂ ಇದ್ದದ್ದು ಈಗ 750 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆಯೂ ಸಾಕಷ್ಟು ಇಳಿದಿದೆ. ಇದೇ ವೇಳೆ ವಿದೇಶೀ ಮಾರುಕಟ್ಟೆಗಳಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 58,000 ರುಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 63,270 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,660 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್ಗೆ 58,000 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್ಗೆ 7,400 ರುಪಾಯಿಯಲ್ಲಿ ಇದೆ.
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
ಇದನ್ನೂ ಓದಿ: Forex: ಭಾರತದ ಫಾರೆಕ್ಸ್ ರಿಸರ್ವ್ಸ್ 623 ಬಿಲಿಯನ್ ಡಾಲರ್ಗೆ ಹೆಚ್ಚಳ; ಸತತ 7ನೇ ವಾರ ಏರಿಕೆ; 22 ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ
ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಮುಂದಿನ ವರ್ಷದಲ್ಲಿ ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಶೇಖರಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ